ಕರಾವಳಿ

ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗ ಅತೀ ಅವಶ್ಯಕ : ಯೋಗಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ

Pinterest LinkedIn Tumblr

ಮಂಗಳೂರು ಜೂನ್ 13 : ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಪೂರ್ವಭಾವಿ ಯೋಗ ತರಬೇತಿ ಶಿಬಿರ 3 ದಿನಗಳ ಕಾಲ ನಗರದ ಹಂಪನಕಟ್ಟೆಯ ಶರವು ಮಹಾಗಣಪತಿ ಧ್ಯಾನ ಮಂದಿರದಲ್ಲಿ ನಡೆಯಿತು.

ಖ್ಯಾತ ಯೋಗಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಶಿಬಿರ ನಡೆಯಿತು. ಯೋಗ ಮನುಷ್ಯನ ಆರೋಗ್ಯಕ್ಕೆ ಅತೀ ಅವಶ್ಯಕ. ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗವನ್ನು ಪ್ರತಿಯೊಬ್ಬರು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗೋಪಾಲಕೃಷ್ಣ ದೇಲಂಪಾಡಿ ಅವರು ಕರೆ ನೀಡಿದರು.

ದಿನದ 8 ಗಂಟೆಗಳ ಕಾಲ ನಿಂತುಕೊಂಡು ಒತ್ತಡದ ಕೆಲಸ ಮಾಡುವ ಗೃಹರಕ್ಷಕರಿಗೆ ಯೋಗ ಅತ್ಯಂತ ಅನಿವಾರ್ಯ ಎಂದು ಅವರು ನುಡಿದರು.

ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ನೇತೃತ್ವದಲ್ಲಿ ಶಿಬಿರ ನಡೆಯಿತು. ಸುಮಾರು 25 ಮಂದಿ ಗೃಹರಕ್ಷಕರು ಈ ಶಿಬಿರದಲ್ಲಿ ಭಾಗವಹಿಸಿದರು.

Comments are closed.