ಕರಾವಳಿ

ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವು ಪ್ರಕರಣ : ಸಿಓಡಿಗೆ ವಹಿಸಲು ಆಗ್ರಹಿಸಿ ಪ್ರತಿಭಟನೆ

Pinterest LinkedIn Tumblr

ಮಂಗಳೂರು, ಜೂನ್.20: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿನ ಪ್ರಕರಣ ನಡೆದು 11 ತಿಂಗಳಾದರೂ ತನಿಖೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ. ತನಿಖಾಧಿಕಾರಿ 2 ತಿಂಗಳೊಳಗೆ ಈ ಪ್ರಕರಣವನ್ನು ಬೇಧಿಸುವುದಾಗಿ ಹೇಳಿದ್ದರೂ ಯಾವುದೇ ಪ್ರಗತಿಯಾಗಿಲ್ಲ. ಹಾಗಾಗಿ ಜುಲೈ 20ರೊಳಗೆ ಈ ಪ್ರಕರಣವನ್ನು ಸಿಒಡಿಗೆ ಕೊಟ್ಟು ನ್ಯಾಯ ದೊರಕಿಸಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಜಸ್ಟೀಸ್ ಫಾರ್ ಕಾವ್ಯ ಹೋರಾಟ ಸಮಿತಿಯ ಸಂಚಾಲಕ, ನ್ಯಾಯವಾದಿ ದಿನಕರ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಜಸ್ಟೀಸ್ ಫಾರ್ ಕಾವ್ಯ ಹೋರಾಟ ಸಮಿತಿ ವತಿಯಿಂದ ಮೂಡಬಿದ್ರೆಯ ಆಳ್ವಾಸ್ ಕಾಲೇಜ್ ವಿದ್ಯಾರ್ಥಿನಿ ಕಾವ್ಯಾಳ ಅಸಹಜ ಸಾವಿನ ಪ್ರಕರಣವನ್ನು ಸಿಒಡಿಗೆ ಒಪ್ಪಿಸುವಂತೆ ಆಗ್ರಹಿಸಿ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮರ್ಪಕ ತನಿಖೆ ನಡೆದಿಲ್ಲವಾದ್ದರಿಂದ ಪ್ರಕರಣವನ್ನು ಸಿಒಡಿ ಮೂಲಕ ನಡೆಸಬೇಕೆಂಬುದು ನಮ್ಮ ಆಗ್ರಹ ಎಂದವರು ಒತ್ತಾಯಿಸಿದರು.

Comments are closed.