ಕರಾವಳಿ

ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಾರಣ :ಯೋಗಿಶ್ ಶೆಟ್ಟಿ ಜೆಪ್ಪು ಆರೋಪ

Pinterest LinkedIn Tumblr

ಮಂಗಳೂರು, ಜುಲೈ.7: ನವಯುಗ ಕಂಪೆನಿಯು 2010ರಲ್ಲಿ ರಾ.ಹೆ.66ರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿತ್ತು. ಆದರೆ 8 ವರ್ಷವಾದರೂ ಕೂಡ ಇದರ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ತುರವೇ ಸ್ಥಾಪಕಾಧ್ಯಕ್ಷ ಯೋಗಿಶ್ ಶೆಟ್ಟಿ ಜೆಪ್ಪು ಅಕ್ರೋಶ ವ್ಯಕ್ತ ಪಡಿಸಿದ್ದಾರೆ.

ರಾ.ಹೆ.66ರ ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ವಿಳಂಬ ಹಾಗೂ ಅಕ್ರಮ ಟೋಲ್ ಸಂಗ್ರಹದ ವಿರುದ್ಧ ತುಳುನಾಡ ರಕ್ಷಣಾ ವೇದಿಕೆಯ ವತಿಯಿಂದ ಶನಿವಾರ ನಗರದ ಪಂಪ್‌ವೆಲ್ ಸರ್ಕಲ್ ಬಳಿ ನಡೆದ ಪ್ರತಿಭಟನಾ ಸನ್ಹೆಯನ್ನುದ್ದೇಶಿಸಿ ಅವರು ಮಾತನಾಡಿದರು.

ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಎರಡೂ ಪ್ರಮುಖ ಜಂಕ್ಷನ್‌ನ ಫ್ಲೈ ಓವರ್ ಕಾಮಗಾರಿ ವಿಳಂಬದಿಂದ ಸಾವಿರಾರು ಮಂದಿಗೆ ತೊಂದರೆಯಾಗುತ್ತಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದ್ದ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

Comments are closed.