ಕರಾವಳಿ

ಅಬ್ಬಕ್ಕ ಪ್ರತಿಷ್ಠಾನಕ್ಕೆ ಇಲಾಖೆಯ ನೆರವು :ಸಚಿವೆ ಜಯಮಾಲ ಭರವಸೆ

Pinterest LinkedIn Tumblr

ಮಂಗಳೂರು: ‘ಸ್ವಾತಂತ್ರ್ಯ ಹೋರಾಟಗಾರ್ತಿ ವೀರರಾಣಿ ಅಬ್ಬಕ್ಕನ ಬಗ್ಯೆ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಪ್ರತಿಷ್ಠಾನವೊಂದರ ಅಗತ್ಯವನ್ನು ತಾನು ಹಲವು ವೇದಿಕೆಗಳಲ್ಲಿ ಪ್ರಸ್ತಾವಿಸಿದ್ದೆ.ಈಗ ಅದು ಕಾರ್ಯಗತವಾಗಿರುವುದರಿಂದ ಸಂತೋಷವಾಗಿದೆ.ಪ್ರತಿಷ್ಠಾನದ ಕಾರ್ಯಕ್ರಮಗಳಿಗೆ ಇಲಾಖೆ ಯಿಂದ ಸೂಕ್ತ ನೆರವು ನೀಡಲಾಗುವುದು’ ಎಂದು ಕರ್ನಾಟಕ ರಾಜ್ಯ ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವೆ ಡಾ.ಜಯಮಾಲ ಭರವಸೆ ನೀಡಿದ್ದಾರೆ.

ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ನಿಯೋಗವು ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ನೇತೃತ್ವದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಅವರನ್ನು ಭೇಟಿಯಾದಾಗ ಸಮಿತಿಯ ಮನವಿಗೆ ಸ್ಪಂದಿಸಿ ಅವರು ಮಾತನಾಡಿದರು.

ಪ್ರಧಾನ ಕಾರ್ಯದರ್ಶಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಪ್ರತಿಷ್ಠಾನದ ಧ್ಯೇಯೋದ್ದೇಶಗಳನ್ನು ವಿವರಿಸಿ ರಾಷ್ಟ್ರಮಟ್ಟದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತಾದ ಮನವಿಯನ್ನು ಸಚಿವೆಗೆ ಅರ್ಪಿಸಿದರು.

ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಸಂಘಟನಾ ಕಾರ್ಯದರ್ಶಿ ತೋನ್ಸೆ ಪುಷ್ಕಳಕುಮಾರ್, ಕೋಶಾಧಿಕಾರಿ ಪಿ.ಡಿ.ಶೆಟ್ಟಿ , ಸತೀಶ್ ಸುರತ್ಕಲ್, ನಿರ್ಮಲ್ ಕುಮಾರ್,ಬೆಟ್ಟಂಪಾಡಿ ಸುಂದರ ಶೆಟ್ಟಿ , ವಿಜಯಲಕ್ಷ್ಮಿ ಬಿ.ಶೆಟ್ಟಿ, ನಮಿತಾ ಶ್ಯಾಮ್,ಶೋಭಾ ಕೇಶವ ಮತ್ತಿತರ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Comments are closed.