ಕರಾವಳಿ

ಶಾಸಕ ವೇದವ್ಯಾಸರಿಂದ ಮಂಗಳೂರು ನ್ಯಾಯಾಲಯದ ಕಟ್ಟಡ ಪರಿಶೀಲನೆ : ಅಗತ್ಯ ವ್ಯವಸ್ಥೆಗಳ ಭರವಸೆ

Pinterest LinkedIn Tumblr

ಮಂಗಳೂರು : ಮಂಗಳೂರು ನ್ಯಾಯಾಲಯದ ಕಟ್ಟಡಕ್ಕೆ ಅಗತ್ಯವಾಗಿ ಬೇಕಾಗಿರುವ ಹೆಚ್ಚುವರಿ ನೀರಿನ ವ್ಯವಸ್ಥೆ ಮತ್ತು ಹಳೆ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಹೋಗಲು ಪಾದಚಾರಿ ಮಾರ್ಗ ರಚನೆಗೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಕರೆಸಿ ಮಾತನಾಡಿದ್ದೇನೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಅವರು ಮಂಗಳೂರು ಮಹಾನಗರ ಪಾಲಿಕೆಯ ನೀರಿನ ವಿಭಾಗ, ಲೋಕೋಪಯೋಗಿ ಇಲಾಖೆ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ನ್ಯಾಯಾಲಯದ ಕಟ್ಟಡಕ್ಕೆ ತೆರಳಿ ಪರಿಶೀಲಿಸಿದರು.

ಮಂಗಳೂರು ನ್ಯಾಯಾಲಯದಲ್ಲಿ ಹೊಸ ಕಟ್ಟಡ ನಿರ್ಮಾಣವಾದ ನಂತರ ಬರುವ ಕಕ್ಷಿದಾರರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಅದರಿಂದ ನೀರಿನ ಅಗತ್ಯ ಕೂಡ ಹೆಚ್ಚಾಗಿದೆ. ಅದನ್ನು ಸರಿಪಡಿಸಲು ಸೂಚಿಸಿದ್ದೇನೆ. ಅದರೊಂದಿಗೆ ಹಳೆ ಕಟ್ಟಡ ಮತ್ತು ಹೊಸ ಕಟ್ಟಡದ ನಡುವೆ ಒಂದು ಪಾದಚಾರಿ ಮಾರ್ಗ ನಿರ್ಮಿಸಲು ಅವರು ಪ್ರಸ್ತಾಪ ಸಲ್ಲಿಸಿದ್ದಾರೆ. ಪರಿಶೀಲನೆ ನಡೆಸಲಾಗುವುದು ಎಂದರು.

ವಕೀಲರಾದ ಪುಷ್ಪಲತಾ, ಜೋಶಿ, ದಿನಕರ ಶೆಟ್ಟಿ, ಬಿಜೆಪಿ ಪ್ರಮುಖರಾದ ವಸಂತ ಜೆ ಪೂಜಾರಿ, ರಂಗನಾಥ ಕಿಣಿ ಮತ್ತಿತ್ತರರು ಉಪಸ್ಥಿತರಿದ್ದರು

Comments are closed.