ಉಡುಪಿ: ಜಿಲ್ಲೆಯಲ್ಲಿ 2018-19ನೇ ಸಾಲಿನ ಸಿಆರ್‌ಝಡ್ ಮರಳುದಿಬ್ಬ ತೆರವಿಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ರಾಜ್ಯ ಕರಾವಳಿ ನಿಯಂತ್ರಣ ವಲಯ ಪ್ರಾಧಿಕಾರ ಅನುಮೋದನೆ ನೀಡಿದೆ. ಮರಳುದಿಬ್ಬ ಮತ್ತು ಅರ್ಹ ಪರವಾನಗಿದಾರರ ಪಟ್ಟಿಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕಚೇರಿ ನಾಮಫಲಕದಲ್ಲಿ ಪ್ರಕಟಿಸಲಾಗಿದೆ.
ಅ.27ರಂದು ಸಾಯಂಕಾಲ 5 ಗಂಟೆ ಒಳಗೆ ಅರ್ಜಿ ಸಲ್ಲಿಸಬಹುದು. ಉಡುಪಿ, ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪರವಾನಗಿ ಪಡೆದುಕೊಂಡವರು ಅರ್ಜಿ ಸಲ್ಲಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಕರಾವಳಿ ನಿಯಂತ್ರಣ ವಲಯ ಪ್ರಾಧಿಕಾರ ಉಡುಪಿ ಜಿಲ್ಲೆಯಲ್ಲಿ 7 ಮರಳು ದಿಬ್ಬಗಳ ತೆರವಿಗೆ ಮಾತ್ರ ಅನುಮೋದನೆ ನೀಡಿದೆ.
Comments are closed.