ಮಂಗಳೂರು : ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪು ಸ್ವಾಗತಾರ್ಹ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹರ್ಷ ವ್ಯಕ್ತಪಡಿಸಿದ್ದಾರೆ.
ರಫೇಲ್ ಯುದ್ಧ ವಿಮಾನ ಖರೀದಿ ದೇಶದ ರಕ್ಷಣಾ ವಿಷಯದಲ್ಲಿ ಅತ್ಯಗತ್ಯ ಎಂದು ಗೊತ್ತಿದ್ದರೂ ಆ ಬಗ್ಗೆ ಸುಳ್ಳು ಆರೋಪ ಮಾಡುತ್ತಾ ಬಂದಿರುವ ಕಾಂಗ್ರೆಸ್ ಜನರಿಗೆ ತಪ್ಪು ಸಂದೇಶ ಕೊಡುತ್ತಿತ್ತು. ಪದೇ ಪದೇ ಒಂದೇ ಸುಳ್ಳನ್ನು ಹೇಳುವ ಮೂಲಕ ಅದನ್ನೇ ನಿಜವೆಂದು ಸಾಬೀತುಪಡಿಸಲು ಹೊರಟ ಕಾಂಗ್ರೆಸ್ ಪಕ್ಷದ ನೈಜ ಬಣ್ಣವನ್ನು ಭಾರತದ ಸರ್ವೋಚ್ಚ ನ್ಯಾಯಾಲಯ ಬಯಲುಗೊಳಿಸಿದಂತೆ ಆಗಿದೆ.
ರಫೇಲ್ ವಿಮಾನ ಖರೀದಿ ವಿಷಯದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಬಿಜೆಪಿ ಸಾಕ್ಷ್ಯಾಧಾರಗಳನ್ನು ನೀಡುತ್ತಾ ಬಂದಿದ್ದರೂ ಕಾಂಗ್ರೆಸ್ ಅದನ್ನು ಅಲ್ಲಗಳೆಯುತ್ತಿತ್ತು. ಈಗ ಸುಪ್ರೀಂ ಕೋರ್ಟ್ ಎಲ್ಲಾ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ತಜ್ಞರ ಅಭಿಪ್ರಾಯ ಕ್ರೋಢಿಕರಿಸಿ ಕೊಟ್ಟಿರುವ ತೀರ್ಪು ಜನರಿಗೆ ಕಾಂಗ್ರೆಸ್ ಮೇಲೆ ಇದ್ದ ಅಲ್ಪ ಸ್ವಲ್ಪ ನಂಬಿಕೆ ಕೂಡ ಹೊರಟು ಹೋಗುವಂತೆ ಮಾಡಿದೆ.
ಇನ್ನು ಮುಂದಾದರೂ ಕಾಂಗ್ರೆಸ್ ರಫೇಲ್ ವಿಷಯದಲ್ಲಿ ಸುಳ್ಳು ಹೇಳುತ್ತಾ ಅಪಪ್ರಚಾರ ಮಾಡದಿರಲಿ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
Comments are closed.