ಉಡುಪಿ: ನಿಗೂಢವಾಗಿ ನಾಪತ್ತೆಯಾದ ಮೀನುಗಾರರನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ಸೂಕ್ತಕ್ರಮಕೈಗೊಳ್ಳಬೇಕು ಮತ್ತು ಈ ಬಗ್ಗೆ ಉನ್ನತ ಮಟ್ಟದ ತನಿಖೆ ಕೈಗೊಳ್ಳುವಂತೆ ಅಖೀಲ ಭಾರತ ಮೀನುಗಾರರ ವೇದಿಕೆ ಬುಧವಾರ ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಮೀನುಗಾರರು ಸುರಕ್ಷಿತವಾಗಿ ಮರಳಿ ಬರಲು ಎಲ್ಲ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಭರವಸೆ ನೀಡಿದರು. ಇದೇ ಸಂದರ್ಭ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಯೂ ಮನವಿ ಮಾಡಲಾಯಿತು.
ಗುಜರಾತ್ ಸಂಸದರಾದ ರಾಜೇಶ್ ಬಾಯಿ ಚುಡಸಮ, ಕರಾವಳಿಯ ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲು, ಶಾಸಕ ಕೆ. ರಘುಪತಿ ಭಟ್, ಮೀನುಮಾರಾಟ ಫೆಡರೇಶನಿನ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಅಖೀಲಭಾರತ ಮೀನುಗಾರರ ವೇದಿಕೆಯ ಅಧ್ಯಕ್ಷ ವೆಲ್ಜಿಬಾಯಿ ಕೆ. ಮಸಾನಿ, ಪ್ರಧಾನ ಕಾರ್ಯದರ್ಶಿ ದಯಾನಂದ ಕೆ. ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಮುಖಂಡರಾದ ಯಶ್‌ಪಾಲ್ ಎ. ಸುವರ್ಣ, ನಿತಿನ್ ಕುಮಾರ್, ಮನೋಹರ ಬೋಳೂರು, ಇಬ್ರಾಹಿಂ, ಕರುಣಾಕರ ಸಾಲ್ಯಾನ್, ಕಿಶೋರ್ ಸುವರ್ಣ, ಅನಿಲ್ ನಿಯೋಗದಲ್ಲಿದ್ದರು.
Comments are closed.