ಕರಾವಳಿ

ಐಎಎಸ್ ಅಧಿಕಾರಿ ಜೊತೆ ಸರಳವಾಗಿ ವಿವಾಹವಾದ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ

Pinterest LinkedIn Tumblr

ಉಡುಪಿ: ಇತ್ತೀಚೆಗಷ್ಟೇ ನೂತನವಾಗಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹೆಪ್ಸಿಬಾ ರಾಣಿ ಕೊರ್ಲಪಾಟಿ- ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಹುಬ್ಬಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸರಳ ವಿವಾಹವಾಗಿದ್ದಾರೆ.

ಈ ಹಿಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಉಜ್ವಲ್ ಕುಮಾರ್ ಘೋಷ್ ಪ್ರಸ್ತುತ ಕೃಷ್ಣಾ ಮೇಲ್ದಂಡೆ ಭೂಸ್ವಾಧೀನ ಹಾಗೂ ಪುನರ್ವಸತಿ ಆಯುಕ್ತರಾಗಿ ವರ್ಗಾವಣೆಗೊಂಡಿದ್ದರು. ಸೋಮವಾರ ಮಧ್ಯಾಹ್ನ ಹುಬ್ಬಳ್ಳಿ ಮಿನಿ ವಿಧಾನಸೌದದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರು ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.

ಉಜ್ವಲ್ ಕುಮಾರ್ ಮೂಲತ: ಜಾರ್ಖಂಡ್ ನಿವಾಸಿಯಾಗಿದ್ದು, 2008 ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಹೆಪ್ಸಿಬಾ ರಾಣಿ 2010 ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, ಇತ್ತೀಚೆಗಷ್ಟೇ ಉಡುಪಿಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು.

Comments are closed.