ಕರಾವಳಿ

ಸ್ವೀಪ್ – ಮತದಾರರ ಜಾಗೃತಿ ಮಾಹಿತಿ ಕರಪತ್ರ ಬಿಡುಗಡೆ

Pinterest LinkedIn Tumblr

ಮಂಗಳೂರು :ಮತದಾರರ ಜಾಗೃತಿ ಮಾಹಿತಿ ಕರಪತ್ರ, ಚುನಾವಣೆಗೆ ಸಂಬಂಧಿಸಿದಂತೆ ಲೋಗೋವನ್ನು ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಹಾಲ್‍ನಲ್ಲಿ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಸೆಲ್ವಮಣಿ ಆರ್, ಡಿಸಿಪಿ ಹನುಮಂತರಾಯ ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನದ ಕುರಿತು ಜನಜಾಗೃತಿ ಮೂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸ್ವೀಪ್ ಕಾರ್ಯಕ್ರಮ, ಇವಿಎಂ ಕುರಿತ ಜಾಗೃತಿಗೆ ಜಿಲ್ಲಾ ಸ್ವೀಪ್ ಸಮಿತಿ ಬಿರುಸಿನಿಂದ ಪ್ರಚಾರ ಕಾರ್ಯಕ್ರಮಗಳನ್ನು ಆರಂಭಿಸಿದೆ.

Comments are closed.