ಕರಾವಳಿ

ಧನಂಜಯ ಕುಮಾರ್ ನಿಧನ : ಸಂಸದ ನಳಿನ್ ಕುಮಾರ್ ಹಾಗೂ ಶಾಸಕ ಕಾಮಾತ್ ತೀವ್ರ ಸಂತಾಪ

Pinterest LinkedIn Tumblr

ಮಂಗಳೂರು : ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ಅವರು ಧೀರ್ಘಕಾಲದ ಅನಾರೋಗ್ಯದಿಂದ ಇವತ್ತು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲುವಿಕೆಯ ದು:ಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಪ್ರಾರ್ಥಿಸಿದ್ದಾರೆ.

ಇದೇ ವೇಳೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೆ.ಭಾಸ್ಕರ್ ಅವರ ಮಾತೃಶ್ರೀ ಲೀಲಾ ಬಾಯಿ ಅವರು ಮುಡಿಪುನಲ್ಲಿರುವ ತಮ್ಮ ಸ್ವಗೃಹದಲ್ಲಿ ದೈವಾಧೀನರಾಗಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲುವಿಕೆಯ ನೋವು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಭಗವಂತ ನೀಡಲಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಪ್ರಾರ್ಥಿಸಿದ್ದಾರೆ

Comments are closed.