ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ.
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಗುರುವಾರ ಪ್ರಮೋದ್ ಮಧ್ವರಾಜ್ ಅವರಿಗೆ ಸ್ಪರ್ಧೆ ನಿಟ್ಟಿನಲ್ಲಿ ಬಿ ಫಾರ್ಮ್ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮೋದ್ ಮಧ್ವರಾಜ್, ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ದೆಗಿಳಿದಿದ್ದಾರೆ.
ಪ್ರಮೋದ್ ಎದುರಾಳಿಯಾಗಿ ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಕಣಕ್ಕಿಳಿಯಲಿದ್ದಾರೆ. ಹಾಲಿ ಸಂಸದೆಯಾಗಿರುವ ಶೋಭಾ ಈ ಹಿಂದಿನ ಕೆಲಸಕಾರ್ಯಗಳು ಮತ್ತು ಮೋದಿ ಪರವಾದ ಗಾಳಿ ಬಿಜೆಪಿಗೆ ವರದಾನವಾಗುವ ಎಲ್ಲಾ ಲಕ್ಷಣಗಳು ಇದೆ.
Comments are closed.