ಉಡುಪಿ: ಯುವತಿಯೊಬ್ಬರ ಮೇಲೆ ಮಣಿಪಾಲದ ಲಾಡ್ಜ್‌ನಲ್ಲಿ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ತಾಲೂಕಿನ ಹೊಸೂರು ಸಮೀಪದ ಮಾರಣಕಟ್ಟೆಯ ಜಗದೀಶ್ ಬೋವಿ (24) ಹಾಗೂ ಪೆರ್ಡೂರಿನ ಗಣೇಶ್ ಮಲ್ಯ (26) ಬಂಧಿತ ಆರೋಪಿಗಳು. ಇವರು ಮಾ.17ರಂದು ಯುವತಿಯೊಬ್ಬಳನ್ನು ಮಣಿಪಾಲದ ಲಾಡ್ಜ್‌ಗೆ ಕರೆದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರೆನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಸಂತ್ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಯುವತೊಇಯ ಹೇಳಿಕೆಯಂತೆ ಇಬ್ಬರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Comments are closed.