ಕರಾವಳಿ

ಕಾನೂನಿನ ಅಡೆತಡೆಯಿಲ್ಲದಿದ್ದರೆ ಉಡುಪಿಗೆ ಬರ್ತಾರೆ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್!

Pinterest LinkedIn Tumblr

ಉಡುಪಿ: ಉಡುಪಿ ಕೃಷ್ಣಮಠಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ ಕೊಟ್ಟು ಕೃಷ್ಣ ದರ್ಶನ ಮಾಡಿದ್ದಾರೆ. ಪರ್ಯಾಯ ಪಲಿಮಾರು ಶ್ರೀಗಳನ್ನು ಭೇಟಿ ಮಾಡಿ ಸಮಾಲೋಚನೆ ಮಾಡಿದ್ದಾರೆ. ಈ ಸಂದರ್ಭ ರಕ್ಷಣಾ ಸಚಿವರ ಬಳಿ ಉಡುಪಿಗೆ ಅಭಿನಂದನ್ ವರ್ಧಮಾನ್ ರನ್ನು ಕಳುಹಿಸಿಕೊಡಿ ಎಂದು ವಿನಂತಿಸಿದ್ದಾರೆ.

ಅಭಿನಂದನ್ ಅವರನ್ನು ಉಡುಪಿಗೆ ಕಳುಹಿಸಿಕೊಡಿ, ವಿಂಗ್ ಕಮಾಂಡರ್ ಅಭಿನಂದನ್ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಪಾಕಿಸ್ತಾನದ ನೆಲದಲ್ಲೂ ಎದೆಗುಂದದೆ ದೇಶದ ಗೌರವ ಕಾಪಾಡಿದ್ದಾರೆ. ಅಭಿನಂದನ್ ದಿಟ್ಟತನವನ್ನು ವಿಶ್ವವೇ ಕೊಂಡಾಡಿದೆ. ಕೃಷ್ಣಮಠದಲ್ಲಿ ಅಭಿನಂದನ್ ಗೆ ಗೌರವಾರ್ಪಣೆ ಮಾಡಬೇಕು ಎಂಬ ಇಚ್ಛೆಯಿದೆ ಎಂದರು. ಕೃಷ್ಣ ಮಠಕ್ಕ ಚಿನ್ನದ ಮಹಡಿಯ ನಿರ್ಮಾಣ ಆಗುತ್ತಿದೆ. ಬ್ರಹ್ಮಕಲಶೋತ್ಸವ ಸಂದರ್ಭ ಅಭಿನಂದನ್ ಗೆ ಮಠದ ಗೌರವ ಕೊಡುವ ಆಕಾಂಕ್ಷೆಯಿದೆ ಎಂದು ಸ್ವಾಮೀಜಿ ಹೇಳಿದರು.

ಇದಕ್ಕೆ ಉತ್ತರಿಸಿದ ನಿರ್ಮಲಾ ಸೀತಾರಾಮನ್, ಇಲಾಖೆಗೆ ಕಾನೂನಾತ್ಮಕ ಅಡೆ ತಡೆ ಇಲ್ಲದಿದ್ದರೆ ಕಳುಹಿಸಿಕೊಡುತ್ತೇವೆ. ರಕ್ಷಣಾ ಇಲಾಖೆಗೆ ಈ ಬಗ್ಗೆ ಒಂದು ಪತ್ರ ಬರೆಯಿರಿ ಎಂದರು.

Comments are closed.