ಮಂಗಳೂರು : ಕನ್ನಡ ಭಾಷೆ ಹಾಗೂ ಅಂಗನವಾಡಿ ಕೇಂದ್ರಗಳ ಮೇಲಿನ ರಾಜ್ಯ ಸರಕಾರದ ಧಾಳಿಯನ್ನು ವಿರೋಧಿಸಿ CPIM ಕರ್ನಾಟಕ ರಾಜ್ಯ ಸಮಿತಿ ಕರೆಯ ಮೇರೆಗೆ CPIM ದ.ಕ.ಜಿಲ್ಲಾ ಸಮಿತಿ ಆಶ್ರಯದಲ್ಲಿ ಸೋಮವಾರ ಮಂಗಳೂರಿನ ದ.ಕ.ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದCPIMನ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಸರಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮವನ್ನು ಪ್ರಾರಂಭಿಸುವ ರಾಜ್ಯ ಸರಕಾರದ ತಪ್ಪು ನಿರ್ಧಾರವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ LKG,UKG ಗಳನ್ನು ಪ್ರಾರಂಭಿಸಲು ಒತ್ತಾಯಿಸುವುದಾಗಿ ಅವರು ತಿಳಿಸಿದರು.
CPIMನ ಕರ್ನಾಟಕ ರಾಜ್ಯಾಧ್ಯಕ್ಷರೂ ಹಾಗೂ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಎಸ್.ವರಲಕ್ಷ್ಮಿ,CITU ರಾಜ್ಯ ಉಪಾಧ್ಯಕ್ಷರಾದ ಪದ್ಮಾವತಿ ಶೆಟ್ಟಿ,CITU ರಾಜ್ಯ ಸಮಿತಿ ಸದಸ್ಯರಾದ ಶಿವಕುಮಾರ್ ಮುಂತಾದವರು ಸಭೆಯನ್ನುದ್ದೇಶಿಸಿ ಮಾತನಾಡಿದರು.
Comments are closed.