ಹಾವು ಕಚ್ಚಿದ್ರೆ ವ್ಯಕ್ತಿ ಮೊದಲು ತನ್ನ ಜೀವ ಉಳಿಸಿಕೊಳ್ಳುವ ಪ್ರಯತ್ನ ಮಾಡ್ತಾರೆ. ಆದರೆ ಇಲ್ಲೊಬ್ಬ ಹಾವು ಕಚ್ಚಿದ ತಕ್ಷಣ ಮತ್ತೆ ಇನ್ನೊಬ್ಬರನ್ನು ಆ ಹಾವು ಕಚ್ಚೋದು ಬೇಡ ಎಂಬ ಕಾರಣಕ್ಕೆ ಆಸ್ಪತ್ರೆಗೆ ಹಾವನ್ನು ತನ್ನೊಂದಿಗೆ ತಂದ ವಿಚಿತ್ರ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೆಲದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ, ಕಾಲುವೆಗಳು ತುಂಬಿ ಹರಿಯುತ್ತಿವೆ. ಈ ಮಧ್ಯೆ ಹೆಬ್ಬಾವೊಂದು ಚೌಥನಿ ಹೊಳೆಯ ಬಳಿ ಹರಿಯುವ ನೀರಿನಲ್ಲಿ ಹರಿದು ಬಂದಿದ್ದು, ರಸ್ತೆಯಲ್ಲಿ ಮತ್ಯಾರಿಗಾದರೂ ಕಚ್ಚಿದರೆ ಅಪಾಯವಾಗುತ್ತದೆ. ಎಂದು ತಿಳಿದ ಭಟ್ಕಳ ತಾಲ್ಲೂಕಿನ ಪುರವರ್ಗದ ವೆಂಕಟರಮಣ ನಾಯ್ಕ ಎಂಬ ವ್ಯಕ್ತಿ ತನ್ನ ಕೆಲವು ಸ್ನೇಹಿತರ ಸಹಾಯದಿಂದ ಹಾವನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದಾರೆ.
ಈ ವೇಳೆ ವೆಂಕಟರಮಣ ನಾಯ್ಕ ಎಂಬ ವ್ಯಕ್ತಿಗೆ ಕಚ್ಚಿದೆ. ಹೆಬ್ಬಾವಿನಿಂದ ಕಚ್ಚಿಸಿಕೊಂಡ ಆತ ವಿಚಲಿತಗೊಂಡ , ಆರೇಳು ಅಡಿ ಉದ್ದದ ಹೆಬ್ಬಾವವನ್ನು ತಮ್ಮ ಸ್ನೇಹಿತರ ಸಹಾಯದೊಂದಿಗೆ ಹಿಡಿದುಕೊಂಡೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದರು.
ಇನ್ನೂ ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ಬಂದು ಹಾವನ್ನು ಹಿಡಿದುಕೊಂಡು, ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದರು. ವೆಂಕಟರಮಣ ಅವರಿಗೆ ಭಟ್ಕಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
Comments are closed.