ಕರಾವಳಿ

ಬಿ.ಎಸ್.ವೈ ನೇತೃತ್ವದ ಬಿಜೆಪಿ ಸರಕಾರ ಉತ್ತಮ ಆಡಳಿತ ನೀಡಲಿದೆ: ಹಾಲಾಡಿ ಶ್ರೀನಿವಾಸ ಶೆಟ್ಟಿ

Pinterest LinkedIn Tumblr
ಕುಂದಾಪುರ: ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜನರ ಆಶೋತ್ತರಗಳನ್ನು ಪೂರೈಸುತ್ತದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಲಿದ್ದು ಉತ್ತಮ ಆಡಳಿತ ನೀಡಲಿದೆ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ.
ಸಚಿವ ಸ್ಥಾನದ ಆಂಕಾಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಪಕ್ಷವಾದ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಶಾಸಕನಾಗಿರುವೆ. ಹಾಗಾಗಿ ಪಕ್ಷದ ಮಾರ್ಗಸೂಚಿಗಳನ್ನು ನಾವು ಒಪ್ಪಬೇಕಿದೆ. ಪಕ್ಷ ಹಾಗೂ ವರಿಷ್ಠರ ತೀರ್ಮಾನಕ್ಕೆ ಬದ್ದನಾಗಿರುವೆ ಎಂದರು.
ಕರಾವಳಿ ಜಿಲ್ಲೆಯಲ್ಲಿಯೇ ಕುಂದಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ಹೆಚ್ಚು ಬಾರಿ ಗೆದ್ದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಆಗಿದ್ದಾರೆ. ಹಾಲಾಡಿಯವರಿಗೆ ಮಂತ್ರಿ ಸ್ಥಾನ ನೀಡಬೇಕೆಂಬ ಕೂಗು ಕಾರ್ಯಕರ್ತರು ಹಾಗೂ ಅಭಿಮಾನಿಗಳದ್ದಾಗಿದೆ.
ವರದಿ- ಯೋಗೀಶ್ ಕುಂಭಾಸಿ

Comments are closed.