ಕರಾವಳಿ

ಉಡುಪಿ ಜಿಲ್ಲಾದ್ಯಂತ ಬಾರಿ ಮಳೆ ಹಿನ್ನೆಲೆ; 3 ದಿನ ‘ರೆಡ್ ಅಲರ್ಟ್’-ನಾಳೆ ಶಾಲೆ ಕಾಲೇಜು ರಜೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾದ್ಯಂತ ಬಾರಿ ಮಳೆ ಹಿನ್ನೆಲೆ ಮೂರು ದಿನ ‘ರೆಡ್ ಅಲರ್ಟ್’-ನಾಳೆ ಶಾಲೆ ಕಾಲೇಜು ರಜೆಕಳೆದ ಒಂದೆರಡು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಆ.7, 8 ಮತ್ತು 9ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದು ಈ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ 20 ಸೆ.ಮೀ.ಗಿಂತ ಅಧಿಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ ಎಂದರು.

ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ಆ. 7 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದು ಭಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಹಶೀಲ್ದಾರ್‌ಗಳು ಸಂಪರ್ಕ ದಲ್ಲಿದ್ದು, ನೆರೆ, ಕಡಲ್ಕೊರೆತ ಸಹಿತ ಪ್ರಾಕೃತಿಕ ವಿಕೋಪದ ತುರ್ತು ಪರಿಹಾರ ಕಾರ್ಯಾಚರಣೆಗೆ ಸಂಬಂಧಿಸಿದ ಸಲಕರಣೆಗಳನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ವಿವಿಧ ಇಲಾಖೆಗಳು ಪರಸ್ಪರ ಸಮನ್ವಯತೆಯೊಂದಿಗೆ ಇದ್ದು, ಪ್ರಾಕೃತಿಕ ವಿಕೋಪವನ್ನು ಎದುರಿಸಲು ಸಜ್ಜಾಗಿದೆ ಎಂದರು.

Comments are closed.