ಉಡುಪಿ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ತಾ.ಪಂ ಮತ್ತು ಗ್ರಾ.ಪಂ.ಕ್ಷೇತ್ರಗಳ ಸದಸ್ಯ ಸ್ಥಾನಗಳಿಗೆ ನವೆಂಬರ್ 12 ರಂದು ಉಪಚುನಾವಣೆ ನಡೆಯಲಿದ್ದು ಈ ಬಗ್ಗೆ ಪ್ರಕಟಣೆಯೊಂದು ಹೀಗಿದೆ.
ಕಟಪಾಡಿ ಗ್ರಾ.ಪಂ. ವ್ಯಾಪ್ತಿಯ ಯೇಣಗುಡ್ಡೆ ಮತ್ತು ಕಲ್ಯಾ ಗ್ರಾ.ಪಂ. ವ್ಯಾಪ್ತಿಯ ಕಲ್ಯಾ ಪಂಚಾಯತ್ ನ ಸದಸ್ಯ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಈ ಕ್ಷೇತ್ರಗಳಲ್ಲಿ ಚುನಾವಣೆ ನಡೆಯದ ಕಾರಣ , ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ) ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ, ನವೆಂಬರ್ 12 ರಂದು ಸಾರ್ವತ್ರಿಕ ರಜೆ ಅನ್ವಯಿಸುವುದಿಲ್ಲ.
Comments are closed.