ಉಡುಪಿ: ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಉಡುಪಿ ಮೂಲದ ಇಂಜಿನಿಯರಿಂಗ್ ಪದವೀಧರ ಯುವಕ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಉಡುಪಿ ಕಲ್ಯಾಣಪುರದ ನಿವಾಸಿ ಗ್ರೇಗ್ ಮೈಕಲ್ ಕಾರ್ಡಿನ್ (23) ಮೃತ ಯುವಕ.
ಘಟನೆ ವಿವರ: ಬೆಂಗಳುರು ಏರ್ ಪೋರ್ಟ್ ರಸ್ತೆಯಲ್ಲಿ ಗ್ರೇಗ್ ಮೈಕಲ್ ಬೈಕಿನಲ್,ಲಿ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ಪರಿಣಾಮ ಗ್ರೇಗ್ ರಸ್ತೆಗೆ ಎಸೆಯಲ್ಪಟ್ಟು ತೀವ್ರವಾದ ಗಾಯ ಉಂಟಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಏರ್ ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.