ಕರಾವಳಿ

ಉಡುಪಿಯಲ್ಲಿ 103 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ- ದಂಡ ವಸೂಲಿ

Pinterest LinkedIn Tumblr

ಉಡುಪಿ: ಉಡುಪಿಯಲ್ಲಿ 103 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ- ದಂಡ ವಸೂಲಿಉಡುಪಿ ನಗರಸಭಾ ವ್ಯಾಪ್ತಿಯ ಸರ್ವಿಸ್ ಬಸ್ಸು ನಿಲ್ದಾಣದ ಬಳಿ ಇರುವ ಹೂವಿನ ಮಾರುಕಟ್ಟೆ ಹಾಗೂ ವಿವಿಧ ಅಂಗಡಿಗಳಿಗೆ ಸಾರ್ವಜನಿಕ ದೂರಿನ ಮೇರೆಗೆ ಹಠಾತ್ ದಾಳಿ ನಡೆಸಿ, ಒಟ್ಟು 103 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು 6000 ರೂ. ದಂಡ ವಸೂಲಿ ಮಾಡಲಾಯಿತು.

ಸಾರ್ವಜನಿಕರು ಹಾಗೂ ಉದ್ದಿಮೆದಾರರು ನಾನ್ ಓವನ್ ಚೀಲಗಳು ಸೇರಿದಂತೆ ನಿಷೇದಿತ ಪ್ಲಾಸ್ಟಿಕ್ ಚೀಲಗಳು ಮತ್ತು ಇನ್ನಿತರ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಯಾ ಮಾರಾಟ ಇನ್ನು ಮುಂದೆಯೂ ಕಂಡುಬಂದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಂಡ ವಿಧಿಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೌರಾಯುಕ್ತ ಆನಂದ ಕಲ್ಲೋಳಿಕರ್ ಎಚ್ಚರಿಕೆ ನೀಡಿರುತ್ತಾರೆ.

ದಾಳಿಯಲ್ಲಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಶಶಿರೇಖ, ಕರುಣಾಕರ ವಿ ಮತ್ತು ಸ್ಯಾನಿಟರಿ ಸೂಪರ್ವೈಸರ್ ನಾಗಾರ್ಜುನ್, ಸುನೀಲ್ ಉಪಸ್ಥಿತರಿದ್ದರು.

Comments are closed.