ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಗ್ರಾಮಾಂತರ ಕೈಗಾರಿಕೆ ಇಲಾಖೆ ವತಿಯಿಂದ ಕುಂದಾಪುರ ತಾಲೂಕು ಪಂಚಾಯತ್‍ನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ವಿವಿಧ ಕಸಬುಗಳ ಉಪಕರಣಗಳನ್ನು ಉಚಿತವಾಗಿ ವಿತರಿಸಲಾಯಿತು. ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಕಾರ್ಯಕ್ರಮ ಉದ್ಘಾಟಿಸಿ, ವಿವಿಧ ಕಸುಬುಗಳ ಕುಶಲಕರ್ಮಿಗಳಿಗೆ ಉಪಕರಣಗಳನ್ನು ವಿತರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪಂಚಾಯತ್‍ನ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಕೌಡೂರು, ಉಪಕರಣಗಳನ್ನು ವಿತರಿಸಿ ಕುಶಲಕರ್ಮಿಗಳು ಪಡೆದ ಉಪಕರಣಗಳನ್ನು ಸದುಪಯೋಗಪಡಿಸಿಕೊಂಡು ವಂಶ ಪಾರಂಪರೆಯಾಗಿ ಬಂದಿರುವ ಕಸುಬುಗಳನ್ನು ಮುಂದುವರಿಸಿಕೊಂಡು ಹೋಗುವಂತೆ ತಿಳಿಸಿದರು.
ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ಯಾಮಲಾ ಕುಂದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಶ್ರೀಲತಾ ಸುರೇಶ್ ಶೆಟ್ಟಿ, ರೋಹಿತ್ ಕುಮಾರ್ ಶೆಟ್ಟಿ, ಬಾಬು ಹೆಗ್ಡೆ, ಸುರೇಶ ಬಟ್ವಾಡಿ, ಗೌರಿ ದೇವಾಡಿಗ, ಶಂಕರ ಪೂಜಾರಿ, ಜ್ಯೋತಿ ಎಂ ಹಾಗೂ ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ರೂಪಾ ಬಿ. ಪೈ, ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್ ಉಪಸ್ಥಿತರಿದ್ದರು.
ಉಡುಪಿ ಜಿ.ಪಂ. ಗ್ರಾಮಾಂತರ ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕ ಜಿ. ವಾಮನ ನಾಯ್ಕ ಸ್ವಾಗತಿಸಿ, ಪ್ರಾಸ್ತವಿಕವಾಗಿ ಇಲಾಖಾ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಅರುಣ್ ಕುಮಾರ್ ಶೆಟ್ಟಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕಿನ ಸುಮಾರು 190 ಜನರಿಗೆ ಉಪಕರಣಗಳನ್ನು ವಿತರಿಸಲಾಯಿತು.
Comments are closed.