ಮಂಗಳೂರು ಮಾರ್ಚ್ 20 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸ್ತ್ರೀ-ಶಕ್ತಿ (ಒಕ್ಕೂಟ) ಮಂಗಳೂರು ಮತ್ತು ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಇವರ ಜಂಟೀ ಆಶ್ರಯದಲ್ಲಿ ಜರುಗಿದ ಲಿಂಗತ್ವದ ಸಮಾನತೆ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಕಾಲೇಜು ಸಂಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಎ.ಜಿ., ಮಹಿಳೆಯರಲ್ಲಿ ಅಗಾಧ ಶಕ್ತಿ ಇದೆ ಗಂಡುಮಕ್ಕಳಿಗೆ ಸರಿಸಮಾನವಾಗಿ ಹೆಣ್ಣುಮಕ್ಕಳಿಗೂ ಉತ್ತಮ ಶಿಕ್ಷಣ ನೀಡಬೇಕು, ಗಂಡು -ಹೆಣ್ಣು ಮಕ್ಕಳ ನಡುವೆ ಯಾವುದೇ ತಾರತಮ್ಯ ಮಾಡಬಾರದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ರೆ. ಫಾದರ್ ಪ್ರವೀಣ್ ಮಾರ್ಟಿಸ್ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ಭಾಗವಹಿಸಿದರು.
ಸದರಿ ಕಾಲೇಜಿನ ಅಧ್ಯಾಪಕ ವೃಂಧ, ವಿದ್ಯಾರ್ಥಿಗಳು ಸೇರಿ ಸುಮಾರು 300 ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
Comments are closed.