ಉಡುಪಿ: ಕೋವಿಡ್-19 ವಿರುದ್ಧ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು (ಎನ್.ಆರ್.ಎಚ್.ಎಮ್) ಅವರುಗಳು ಕೊರೋನಾ ವಾರಿಯರ್ಸ್ ಆಗಿ ಶ್ರಮವಹಿಸಿ ದುಡಿಯುತ್ತಿದ್ದಾರೆ.
ಇವರ ಈ ಶ್ರಮವನ್ನು ಮನಗಂಡು ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕ ಕೆ. ರಘುಪತಿ ಭಟ್ ಇವರ ನೇತೃತ್ವದಲ್ಲಿ “ಆಸರೆ ಚಾರಿಟೇಬಲ್ ಟ್ರಸ್ಟ್ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ (ರಿ.) ವತಿಯಿಂದ 2000 ರೂ. ಮೊತ್ತದ ಚೆಕ್ ಅನ್ನು ಪ್ರೋತ್ಸಾಹದಾಯಕವಾಗಿ ಉಡುಪಿಯ ಶಾರಾದ ಕಲ್ಯಾಣ ಮಂಟಪದ ಸಭಾಭವನದಲ್ಲಿ ಜಿಲ್ಲಾಧಿಕಾರಿಯವರ ಮುಖಾಂತರ ವಿತರಿಸಿದರು. ಹಾಗೂ ಆರ್ಥಿಕವಾಗಿ ತೀರಾ ಹಿಂದುಳಿದ 100 ಅಂಗವಿಕಲ ಕುಟುಂಬಕ್ಕೆ ವಿಶೇಷವಾದ ಆಹಾರ ಪ್ಯಾಕೇಜ್ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಆರೋಗ್ಯಾಧಿಕಾರಿ ಡಾ. ನಾಗರತ್ನ , ಕಡಿಯಾಳಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ವಸಂತ್ ಭಟ್ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭ ಶಾಸಕ ಕೆ. ರಘುಪತಿ ಭಟ್ ಇವರು ಆಶಾ ಕಾರ್ಯಕರ್ತರಿಗೆ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯವರಿಗೆ ವಿಶೇಷವಾದ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.
Comments are closed.