ಉಡುಪಿ: ಅರಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು ಇದರ ಪರಿಣಾಮ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಹೀಗಾಗಿ ಭಾರತೀಯ ಹವಾಮಾನ ಇಲಾಖೆಯು ಬುಧವಾರ ಯೆಲ್ಲೋ ಅಲರ್ಟ್ ಘೋಷಿಸಿದೆ.
(ಸಾಂದರ್ಭಿಕ ಚಿತ್ರ)
ಕಳೆದ ಕೆಲ ದಿನಗಳಿಂದ ಕರಾವಳಿ ಭಾಗದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ.
ಯೆಲ್ಲೋ ಅಲರ್ಟ್ ಘೋಷಿಸಿದ ಪರಿಣಾಮ ಕರಾವಳಿ ಭಾಗದಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಗಾಳಿ ಮತ್ತು ಗುಡುಗು ಕೂಡ ಇರಲಿದೆ.
ಉಭಯ ಜಿಲ್ಲೆಗಳಲ್ಲಿ ಬುಧವಾರದಂದು ಸೆಕೆ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸಂಜೆ ವೇಳೆ ಮೋಡ ಕವಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆಯ ಅಂಕಿ – ಅಂಶದಂತೆ ಮಂಗಳವಾರದಂದು ಪಣಂಬೂರಿನಲ್ಲಿ 36 ಡಿ.ಸೆ. ಗರಿಷ್ಠ ಮತ್ತು 27.2 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.
Comments are closed.