ಉಡುಪಿ: ಕೋವಿಡ್-19 ಸೋಂಕಿತರ ಸಂಖ್ಯೆ ಭಾನುವಾರ ಮತ್ತೆ 10 ಜನರಲ್ಲಿ ದೃಢಪಟ್ಟಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 187ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಓರ್ವ 31 ವರ್ಷದ ವ್ಯಕ್ತಿ ಕತಾರ್ ನಿಂದ ಬಂದ ಪ್ರಯಾಣಿಕನಾಗಿದ್ದರೆ, ಉಳಿದೆಲ್ಲರೂ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇವರಲ್ಲಿ ಕೆಲವರು ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಸದ್ಯ ಅವರನ್ನು ನಿಗಧಿತ ಆಸ್ಪತ್ರೆಗೆ ಸೇರಿಸಲಾಗಿದೆ.
ಶನಿವಾರ ಸಂಜೆಯ ತನಕ ಜಿಲ್ಲೆಯ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 177ಕ್ಕೆ ಏರಿಕೆಯಾಗಿತ್ತು. ಇಂದಿನ ಹೊಸ 10 ಪ್ರಕರಣಗಳ ಕಾರಣದಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 187ಕ್ಕೆ ಏರಿಕೆ ಕಂಡಿದೆ.
Comments are closed.