ಕರಾವಳಿ

ಕೊರೋನಾ ನಡುವೆ ಮತ್ತೊಂದು ಭೀತಿ- ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರ ನಡುವೆ ಸದ್ದಿಲ್ಲದೆ ಡೆಂಗ್ಯೂ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಗೆ ಆತಂಕ ತಂದಿದೆ.

ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ನಿಯಂತ್ರಣದಲ್ಲಿದೆ. ಆದರೂ ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆಯಾಗಿದೆ. 2020 ಜನವರಿ ತಿಂಗಳಿನಿಂದ ಮೇ ವರೆಗೆ ಒಟ್ಟು 72 ಡೆಂಗ್ಯೂ ಪ್ರಕರಣ ಪತ್ತೆಯಾಗಿವೆ. ಇದೇ ಸಮಯಕ್ಕೆ 2018ರಲ್ಲಿ 41 ಪ್ರಕರಣ ಕಂಡುಬಂದಿದ್ದವು. ಈ ಬಾರಿ ಜನವರಿಯಿಂದ ಮೇ ಅಂತ್ಯಕ್ಕೆ 53 ಪ್ರಕರಣಗಳು ಕಂಡುಬಂದಿವೆ. ಪ್ರಸಕ್ತ ಸಾಲಿನಲ್ಲಿ 1,058 ಮಂದಿಯ ರಕ್ತದ ಮಾದರಿ ಸಂಗ್ರಹಿಸಿದ್ದು, ಅವರಲ್ಲಿ 72 ಜನರಿಗೆ ಡೆಂಗ್ಯೂ ಪತ್ತೆಯಾಗಿದೆ. ಜನವರಿ ಮತ್ತು ಮೇ ತಿಂಗಳಲ್ಲಿ ಕ್ರಮವಾಗಿ 23, 24 ಪ್ರಕರಣಗಳು ಪತ್ತೆಯಾಗಿವೆ.

ಉಡುಪಿಯ ಮಲ್ಪೆ ಭಾಗದಲ್ಲಿ ಮಲೇರಿಯಾ ಪ್ರಕರಣ, ಹನುಮಂತ ನಗರ, ಕೊಡಂಕೂರು, ನಿಟ್ಟೂರು ಪ್ರದೇಶಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿವೆ. ಉಡುಪಿ ಮತ್ತು ಮಲ್ಪೆಯಲ್ಲಿ ವಲಸೆ ಮತ್ತು ಕಟ್ಟಡ ಕಾರ್ಮಿ ಕರು ಹೆಚ್ಚಿನ ಮಂದಿ ವಾಸಿಸುತ್ತಿರುವುದು ಇದಕ್ಕೆ ಮುಖ್ಯ ಕಾರಣ. ವಲಸೆ ಹೋಗುವ ಜನರಿಂದ ಡೆಂಗ್ಯೂ ಹರಡುವುದು ಹೆಚ್ಚು.

Comments are closed.