ಕುಂದಾಪುರ: ಗುರುವಾರ ಪ್ರಾರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ತಲಾ 8 ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಯಿತು.
ಕುಂದಾಪುರ ತಾಲೂಕಿನಲ್ಲಿ 2,457 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಬೈಂದೂರು ತಾಲೂಕಿನಲ್ಲಿ 2,006 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿರುವ ಬಸ್ಸಿನಲ್ಲಿ ಪರೀಕ್ಷಾ ಕೇಂದ್ರಗಳಿಗೆ ಅಗಮಿಸಿದರು. ಬೆಳಿಗ್ಗೆ 8. 30ಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನೀಡಲಾಯಿತು.
ಪ್ರತಿ ವಿದ್ಯಾರ್ಥಿಯನ್ನು ಥರ್ಮಲ್ ಸ್ಕಾನಿಂಗ್ ಮಾಡಿ ಪರೀಕ್ಷಾ ಕೇಂದ್ರದೊಳಗೆ ಬಿಡಲಾಯಿತು. ಸ್ಕೌಟ್ಸ್, ಗೈಡ್ಸ್ ಸಂಸ್ಥೆಯವರು ಶಿಕ್ಷಣ ಇಲಾಖಾ ಸಿಬ್ಬಂದಿಗಳಿಗೆ ಸಹಕಾರ ನೀಡಿದರು.
ಸಾಮಾಜಿಕ ಅಂತರ ಅಂತರವನ್ನು ಕಾಪಾಡಿಕೊಂಡು ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಿದರು
Comments are closed.