ಕುಂದಾಪುರ: ಬಿಜೆಪಿ ಕುಂದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷದ ಆದೇಶದಂತೆ ಕೊರೋನಾ ಬಗ್ಗೆ ಜನ ಜಾಗ್ರತಿ ಅರಿವು ಮೂಡಿಸಲು ಕ್ಷೇತ್ರದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೈಕ್ ಮೂಲಕ ಜನಜಾಗ್ರತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಯವಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು ,ರೈತ ಮೋರ್ಚಾ ಅಧ್ಯಕ್ಷ ಸುನಿಲ್ ಹೇರಿಕುದ್ರು ಹಾಗೂ ಎಲ್ಲಾ ಮೋರ್ಚಾದ ಅಧ್ಯಕ್ಢರು, ಪ್ರಧಾನದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Comments are closed.