ಉಡುಪಿ: ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿದವರ ಮೃತದೇಹವನ್ನು ಸಂಬಂಧಿಸಿದ ಕುಟುಂಬದವರಿಗೆ ತಾಲೂಕು ಆರೋಗ್ಯಾಧಿಕಾರಿ ಉಪಸ್ಥಿತಿಯಲ್ಲಿಯೇ ಹಸ್ತಾಂತರಿಸಬೇಕು ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಮೃತದೇಹ ಸಾಗಿಸುವಾಗ ಅದು ಕೋವಿಡ್-19 ಪಾಸಿಟಿವ್ ಇರಲಿ ಅಥವಾ ನೆಗೆಟಿವ್ ಇರಲಿ ಮೃತದೇಹವನ್ನು ಸಂಬಂಧಿಸಿದ ಕುಟುಂಬದವರಿಗೆ ತೋರಿಸಿ ಕಳುಹಿಸಬೇಕು. ಮತ್ತು ಕೋವಿಡ್ – 19 ಪಾಸಿಟಿವ್ ಮೃತದೇಹವನ್ನು ಹಸ್ತಾಂತರಿಸುವಾಗ ಒಬ್ಬ ಆರೋಗ್ಯ ಅಧಿಕಾರಿ ಸ್ಥಳದಲ್ಲಿ ಇದ್ದು ಪರಿಶೀಲಿಸಿಯೇ ಹಸ್ತಾಂತರಿಸಬೇಕು. ಸಂಜೆ 6 ರಿಂದ ಬೆಳಗ್ಗೆ 9 ಗಂಟೆವರೆಗೆ ಯಾವುದೇ ಶವವನ್ನು ಬಿಟ್ಟು ಕೊಡಬಾರದು. ಶವ ಬಿಟ್ಟುಕೊಡುವ ಜವಾಬ್ದಾರಿ ವೈದ್ಯರಿಗೆ ಇರಬೇಕು ಮತ್ತು ಯಾವುದೇ ಅಜಾಗರೂಕತೆ ಸಂಭವಿಸದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದ್ದಾರೆ.
Comments are closed.