ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮವು ಫೆಬ್ರವರಿ 16 ರಂದು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.
ಉದ್ಯೋಗ ಮೇಳದ ಅಂಗವಾಗಿ ಉದ್ಯಮಶೀಲತಾ ಕೌಶಲ್ಯ ತರಬೇತಿ, ವೃತ್ತಿ ಮಾರ್ಗದರ್ಶನ ತರಬೇತಿ ಮತ್ತು ಸಂದರ್ಶನ ಪೂರ್ವ ತಯಾರಿಯ ಬಗ್ಗೆ ಕಾರ್ಯಾಗಾರವು ಫೆಬ್ರವರಿ 12 ರಂದು ಬೆಳಗ್ಗೆ 9.30 ಕ್ಕೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ/ಸಂಸ್ಥೆಗಳು ಭಾಗವಹಿಸಿ, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್.ಎಸ್.ಎಲ್.ಸಿ /ಪಿ.ಯು.ಸಿ / ಪದವಿ/ ಡಿಪ್ಲೋಮಾ/ ಐ.ಟಿ.ಐ/ ಸ್ನಾತ್ತಕೋತ್ತರ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ/ ರೆಸ್ಯೂಮ್ (ಬಯೋಡೇಟಾ) ಇತ್ಯಾದಿ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.