ಕರಾವಳಿ

ಮಾ.29 ಗ್ರಾ.ಪಂ ಉಪ ಚುನಾವಣೆ: ವೇತನ ಸಹಿತ ರಜೆ ಘೋಷಣೆ

Pinterest LinkedIn Tumblr

ಉಡುಪಿ: ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಮಾರ್ಚ್ 29 ರಂದು ಉಪ ಚುನಾವಣೆ ನಡೆಯಲಿರುತ್ತದೆ.

(ಸಾಂದರ್ಭಿಕ ಚಿತ್ರ)

ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ/ ಪಟ್ಟಣ ಪಂಚಾಯತಿ / ನಗರ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳ, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳ, ಎಲ್ಲಾ ಶೈಕ್ಷಣಿಕ ಸಂಸ್ಥೆಗಳ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳ, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್‌ಗಳ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳ, ಉಳಿದ ಕೈಗಾರಿಕಾ ಸಂಸ್ಥೆಗಳ ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ, ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಶ್‌ಮೆಂಟ್‌ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಮಾರ್ಚ್ 29 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

Comments are closed.