ಉಡುಪಿ: ಜಿಲ್ಲೆಯ ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ.
ಕೇರಳ ಬಿಜೆಪಿ ಸಹ ಪ್ರಭಾರಿಯಾಗಿರುವ ಸುನಿಲ್ ಕುಮಾರ್ ಅವರು ಕಳೆದ ಮೂರು ತಿಂಗಳಿನಿಂದ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಇಂದು ಅವರಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಶಾಸಕರು ಕ್ವಾರಂಟೈನ್‌ನಲ್ಲಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸುವಂತೆ ಅವರು ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿದ್ದಾರೆ.
ಈ ನಡುವೆ ಸುನೀಲ್ ಕುಮಾರ್ ಅವರ ಜೊತೆಗ ತಂಗಿದ್ದ ಸಿಬ್ಬಂದಿಗಳು ಹಾಗೂ ಸಂಪರ್ಕದಲ್ಲಿದ್ದವರೆಲ್ಲರೂ ಸ್ವಯಂಪ್ರೇರಿತರಾಗಿ ಐಸೋಲೇಷನ್ ನಲ್ಲಿದ್ದಾರೆ
Comments are closed.