ಮಂಗಳೂರು, ಜೂನ್ 04: ಪೊಲೀಸ್ ಇಲಾಖೆಯಲ್ಲಿ ಕಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ)ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ)ಹುದ್ದೆಗಳನ್ನು ಒಳಗೊಂಡಂತೆ 3533 ಖಾಲಿ ಹುದ್ದೆಗಳ ನೇಮಕಾತಿ ಸಲುವಾಗಿ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಮೇ 21 ರಂದು ಪ್ರಕಟಿಸಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿರುತ್ತದೆ. ಸದರಿ ಅಧಿಸೂಚನೆಯನ್ವಯ ಅರ್ಹ ಅಭ್ಯರ್ಥಿಗಳಿಂದ ಮೇ 25 ರಿಂದ ಜೂನ್ 25 ರವರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ https://recruitment.ksp.gov.inನ್ನು ಸಂಪರ್ಕಿಸಬಹುದು ಎಂದು ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ ಬೆಂಗಳೂರು ಅಮ್ರಿತ್ ಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.