ಕುಂದಾಪುರ: ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿಯವರ ಜನ್ಮದಿನದ ಸಲುವಾಗಿ ಬೈಂದೂರು ಯೂತ್ ಕಾಂಗ್ರೆಸ್ ಸಮಿತಿಯಿಂದ ಆ.21 ರಂದು ನಾಗೂರು ಶಾಂತೇರಿ ಕಾಮಾಕ್ಷಿ ಕಲ್ಯಾಣ ಮಂಟಪದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಕೋವಿಡ್ ನಿಯಮಾವಳಿಯಂತೆ ರಕ್ತದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು 80 ಯುನಿಟ್ ರಕ್ತ ಸಂಗ್ರಹ ಮಾಡಲಾಯಿತು.
ಈ ಸಂದರ್ಭದಲ್ಲಿ ಕೆ. ಗೋಪಾಲ ಪೂಜಾರಿಯವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶುಭ ಕೋರಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಮಾಜಿ ಜಿ.ಪಂ ಅಧ್ಯಕ್ಷ ರಾಜು ಪೂಜಾರಿ, ಜಿ.ಪಂ ಮಾಜಿ ಸದಸ್ಯೆ ಗೌರಿ ದೇವಾಡಿಗ, ಬೈಂದೂರು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ, ವಂಡ್ಸೆ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಕರ್ಕಿ, ಕಾಂಗ್ರೆಸ್ ಮುಖಂಡರಾದ ವಿಜಯ್ ಶೆಟ್ಟಿ ಕಾಲ್ತೋಡು, ನಾಗರಾಜ ಗಾಣಿಗ, ರಮೇಶ್ ಗಾಣಿಗ ಕೊಲ್ಲೂರು, ಪ್ರಕಾಶ್ ಉಪ್ಪುಂದ, ರಘುರಾಮ ಶೆಟ್ಟಿ ಮೊದಲಾದವರಿದ್ದರು.
Comments are closed.