ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಯಡ್ತರೆ ರಾಹುತನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಜಾಲಿಯ ಮಂಜುನಾಥ ನಾಯ್ಕ್ (40) ದಾರುಣವಾಗಿ ಮೃತಪಟ್ಟಿದ್ದಾರೆ. ಬೈಕ್ ಸವಾರ ಉಪ್ಪುಂದ ಕರ್ಕಿಕಳಿ ನಿವಾಸಿ ಕಿರಣ್ (21) ಗಂಭೀರ ಗಾಯಗೊಂಡಿದ್ದಾನೆ.
ಘಟನೆಯ ವಿವರ:
ಟೆಂಪೋ ಟ್ರ್ಯಾಕ್ಸ್ ಮೂಲಕ ಧರ್ಮಸ್ಥಳಕ್ಕೆ ತೆರಳಿ ಊರಿಗೆ ಹಿಂತಿರುಗುತ್ತಿದ್ದ ಭಟ್ಕಳ ಜಾಲಿಯ ಮೂಲದ ನಿವಾಸಿಗಳಿದ್ದ ತಂಡ ರಾಹುತನಕಟ್ಟೆ ಬಳಿ ವಾಹನ ನಿಲ್ಲಿಸಿದ್ದು, ಅವರಲ್ಲಿ ಮಂಜುನಾಥ್ ನಾಯ್ಕ್ ಎಂಬುವವರು ರಾಷ್ಟ್ರೀಯ ಹೆದ್ದಾರಿಯ ಎದುರು ಬದಿ ಇದ್ದ ಮೀನಿನ ಅಂಗಡಿಗೆ ತೆರಳುತ್ತಿದ್ದ ಸಂದರ್ಭ ಬೈಂದೂರು ಕಡೆಯಿಂದ ಬುಲೆಟ್ ಬೈಕಿನಲ್ಲಿ ಬಂದ ಯುವಕ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ರಸ್ತೆ ದಾಟುತ್ತಿದ್ದ ವ್ಯಕ್ತಿಯು ಬದಿಗೆ ಎಸೆಯಲ್ಪಟ್ಟು ಅಲ್ಲಿಯೇ ಮೃತಟ್ಟಿದ್ದಾರೆ. ಬುಲೆಟ್ ಬೈಕ್ ಸವಾರ ಡಿವೈಡರ್ ಬದಿಗೆ ಬಿದ್ದಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಂದೂರು ಪೊಲೀಸ್ ಪಿಎಸ್ಐ ಪವನ್ ನಾಯಕ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Comments are closed.