ಉಡುಪಿ: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಮಂಗಳೂರಿನಿಂದ ಉಡುಪಿಗೆ ಆಗಮಿಸಿದ ಬಳಿಕ ಉಡುಪಿ ಶೋಕ ಮಾತಾ ಇಗರ್ಜಿಯಲ್ಲಿ ಪಾರ್ಥಿವ ಶರೀರಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಂತಿಮ ನಮನ ಸಲ್ಲಿಸಿದರು.
ಉಡುಪಿ ಬಿಷಪ್ ಅ.ವಂ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಬಲಿಪೂಜೆ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಚರ್ಚ್ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಲಾಗಿತ್ತು. ಆಸ್ಕರ್ ಅವರ ಪತ್ನಿ ಬ್ಲೋಸಂ ಫೆರ್ನಾಂಡಿಸ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ಜೆ.ಆರ್.ಲೋಬೊ, ಐವನ್ ಡಿಸೊಜ, ಎಂ.ಎ. ಗಫೂರ್ ಮೊದಲಾದವರು ಹಾಜರಿದ್ದರು.
2ಬಾರಿ ಕೇಂದ್ರ ಸಚಿವರಾಗಿದ್ದ ಹಾಗೂ ದೆಹಲಿ ಹಾಗೂ ಕರ್ನಾಟಕ ಕಾಂಗ್ರೆಸ್ ನ ಮಧ್ಯೆ ಕೊಂಡಿಯಂತೆ ಕೆಲಸ ಮಾಡುತ್ತಿದ್ದ ಆಸ್ಕರ್ ಫೆರ್ನಾಂಡೀಸ್ ನಿನ್ನೆ ಕೊನೆಯುಸಿರೆಳೆದಿದ್ದರು. ಆಸ್ಕರ್ ಅವರ ನಿಧನಕ್ಕೆ ಸಾವಿರಾರು ಕಾರ್ಯಕರ್ತರು, ನೂರಾರು ನಾಯಕರು ಕಂಬನಿ ಮಿಡಿದಿದ್ದಾರೆ.
ಇಲ್ಲಾದ ಬಳಿಕ ಉಡುಪಿಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
Comments are closed.