ಉಡುಪಿ: ವೈಯಕ್ತಿಕ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.14ರ ಮಂಗಳವಾರ ಕುಕ್ಕಿಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಆಶಾ ಶೆಟ್ಟಿ(48) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ, ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗದಲ್ಲಿ ಸಕ್ರಿಯರಾಗಿದ್ದರು.
ಇವರು ಡೆತ್ ನೋಟ್ ಬರೆದು ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Comments are closed.