ಕರಾವಳಿ

ಕರಾವಳಿಯಲ್ಲಿ ಸೈಲೆಂಟ್ ಆಗಿದ್ದ ಸ್ಯಾಟಲೈಟ್ ಫೋನ್ ಮತ್ತೆ ಆಕ್ಟಿವ್..!

Pinterest LinkedIn Tumblr

ಮಂಗಳೂರು: ಕಳೆದೊಂದು ವಾರದ ಅವಧಿಯಲ್ಲಿ ದ.ಕ. ಜಿಲ್ಲೆ ಸಹಿತ ರಾಜ್ಯದ ಕೆಲವು ಕಡೆಗಳಿಂದ ನಿಷೇಧಿತ ‘ತುರಾಯಾ ಸ್ಯಾಟಲೈಟ್‌ ಫೋನ್‌’ ಮೂಲಕ ವಿದೇಶಕ್ಕೆ ಸಂಪರ್ಕ ಆಗಿರುವುದರ ಕುರಿತು ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ದೊರೆತಿದೆ ಎಂದು ತಿಳಿದು ಬಂದಿದೆ.

(ಸಾಂದರ್ಭಿಕ ಚಿತ್ರ)

ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕು, ಉಡುಪಿ ಜಿಲ್ಲೆಯ ಹೆಬ್ರಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರಿನ ಅರಣ್ಯ ಭಾಗದಲ್ಲಿ ನಿಷೇಧಿತ ಸ್ಯಾಟಲೈಟ್‌ ಫೋನ್‌ ನೆಟ್‌ವರ್ಕ್‌ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಕೆಲವು ಬಾರಿ ಈ ರೀತಿಯ ಫೋನ್‌ ನೆಟ್‌ವರ್ಕ್‌ಗಳು ಪತ್ತೆಯಾಗಿರುವ ಬಗ್ಗೆ ಸುದ್ದಿ ಹರಿದಾಡಿತ್ತು.

ಇತ್ತೀಚೆಗೆ ಶ್ರೀಲಂಕಾದಿಂದ ತಮಿಳುನಾಡು/ಕೇರಳ, ಕರ್ನಾಟಕ ಕರಾವಳಿ ಮೂಲಕ ಪಾಕಿಸ್ಥಾನ ಕಡೆಗೆ ಶಂಕಿತ ಉಗ್ರರು ಹೋಗುವ ಸಾಧ್ಯತೆ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಪ್ತಚರ ಇಲಾಖೆ ಕರಾವಳಿಯಲ್ಲಿ ಹೈ ಅಲರ್ಟ್‌ಗೆ ಸೂಚಿಸಿತ್ತು.

ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸ್ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.