ಕರಾವಳಿ

ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಜಿ. ಜಗದೀಶ್

Pinterest LinkedIn Tumblr

ಬೆಂಗಳೂರು: ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದ ಡಾ.ಪಿ.ಎಸ್.ಹರ್ಷ ಅವರನ್ನು ವರ್ಗಾವಣೆ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.

ಮುಖ್ಯಮಂತ್ರಿಯ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಅವರಿಗೆ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಯಾಗಿರುವ ಜೇಮ್ಸ್‌ ತಗರನ್‌ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ಅವರನ್ನು ಇತ್ತೀಚೆಗೆ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿತ್ತು.

Comments are closed.