ಮಂಗಳೂರು: ಮೂರು ದಿನಗಳ ಕಾಲ ರಾಜ್ಯದ ಪ್ರವಾಸ ಕೈಗೊಂಡಿದ್ದ ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ್ ಅವರು ತಮ್ಮ ಪತ್ನಿ ಹಾಗೂ ಪುತ್ರಿಯೊಂದಿಗೆ ಅ.8ರ ಶುಕ್ರವಾರ ಸಂಜೆ ಪ್ರವಾಸವನ್ನು ಮುಗಿಸಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಿದರು.
ಈ ಸಂದರ್ಭದಲ್ಲಿ ಅವರಿಗೆ ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಡಿಜಿಪಿ ಜಿತೇಂದ್ರ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ರಾಷ್ಟ್ರಪತಿ ಭವನದ ಅಧಿಕಾರಿಗಳು ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಚಿವರು ರಾಷ್ಟ್ರಪತಿಯವರಿಗೆ ಪುಸ್ತಕವೊಂದನ್ನು ಕಾಣಿಕೆಯಾಗಿ ನೀಡಿದರು.
Comments are closed.