ಕರಾವಳಿ

ಕುಂದಾಪುರ ಬಿಲ್ಲವ ಸಂಘಕ್ಕೆ ಬಿಲ್ಲವ ಆರ್ಯ ಈಡಿಗ ಮಹಾಸಂಸ್ಥಾನದ ನಿಯೋಜಿತ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಭೇಟಿ

Pinterest LinkedIn Tumblr

ಕುಂದಾಪುರ: ಬಿಲ್ಲವ ಆರ್ಯ ಈಡಿಗ ಮಹಾಸಂಸ್ಥಾನದ ನಿಯೋಜಿತ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ಬುಧವಾರ ಕುಂದಾಪುರ ಬಿಲ್ಲವ ಸಂಘಕ್ಕೆ ಭೇಟಿ ನೀಡಿದರು.

2022ರ ಫೆಬ್ರವರಿ 2 ರಂದು ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಬಿಲ್ಲವ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾರೋಹಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಬಿಲ್ಲವ ಸಮಾಜ ಸೇವಾ ಸಂಘ (ರಿ) ಕುಂದಾಪುರದಲ್ಲಿ ಇದೇ ವೇಳೆ ನೇರವೇರಿತು.

ಕಾರ್ಯಕ್ರಮದಲ್ಲಿ ಪೂಜ್ಯನೀಯ ಸ್ವಾಮಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಬಿಲ್ಲವ ಸಂಘದ ಗೌರವ ಅಧ್ಯಕ್ಷ ಸುರೇಶ್ ಎಸ್. ಪೂಜಾರಿಯವರು ಉಪಸ್ಥಿತಿತರಿದ್ದರು.

ಕುಂದಾಪುರ ಬಿಲ್ಲವ ಸಮಾಜಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಡಾ. ಗೋವಿಂದ ಬಾಬು ಪೂಜಾರಿ, ಮಾಣಿ ಗೋಪಾಲ್, ಕಾಳಪ್ಪ ಪೂಜಾರಿ ಕೋಡಿ, ಬೈಂದೂರು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಮಾಸ್ಟರ್ ಕೆರ್ಗಾಲ್, ಶ್ರೀ ನಾರಾಯಣಗುರು ಯುವಕ ಮಂಡಲದ ಅಧ್ಯಕ್ಷ ಶ್ರೀನಾಥ್ ಕಡ್ಗಿಮನೆ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ಸುಮನಾ ಬಿದ್ಕಲ್ಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

Comments are closed.