ಕುಂದಾಪುರ: ಮನೆ ಅಂಗಳದಲ್ಲಿ ಜೋಕಾಲಿ ಆಡುತ್ತಿದ್ದ ಬಾಲಕಿಗೆ, ಕಾರು ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡ ಮೃತಪಟ್ಟ ಘಟನೆ ನಡೆದಿದೆ.
ಕುಂದಾಪುರ ತಾಲೂಕು ಬೀಜಾಡಿ ಗ್ರಾಮ ನಿವಾಸಿ ಸದಾನಂದ ಮತ್ತು ಅನಿತಾ ಎಂಬವರ ಪುತ್ರಿ ಪ್ರಾದಾನ್ಯ (9) ಮೃತಪಟ್ಟ ಬಾಲಕಿ.
ಮಕ್ಕಳಿಗೆ ಬೇಸಿಗ ರಜೆಯಾದ್ದರಿಂದ ಪ್ರಾದಾನ್ಯ ಮನೆಯ ಅಂಗಳದಲ್ಲಿ ಇತರ ಮಕ್ಕಳೊಂದಿಗೆ ಮರಕ್ಕೆ ಸೀರೆ ಜೋಕಾಲಿ ಕಟ್ಟಿ ಆಟ ಆಡುತ್ತಿದ್ದ ಸಂದರ್ಭದಲ್ಲಿ, ಸಂತೋಷ ಎಂಬಾತ ನಿರ್ಲಕ್ಷ್ಯತನದಿಂದ ಅತೀ ವೇಗವಾಗಿ ಕಾರು ಚಲಾಯಿಸಿದ್ದರಿಂದ ಜೋಕಾಲಿ ಆಡುತ್ತಿದ್ದ ಪ್ರಾದಾನ್ಯಳಿಗೆ ಡಿಕ್ಕಿ ಹೊಡೆದಿದೆ. ಬಾಲಕಿ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.