ಮಂಗಳೂರು : ತುಳು ಬಾಷೆಗೆ ಮಾನ್ಯತೆ ಸಿಗಬೇಕು ಮತ್ತು ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂಬ ತುಳುವರ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ತಿಳಿಸುವ ವಿಭಿನ್ನ ಯೋಜನೆಯನ್ನು ತುಳುವೆರೆ ಕುಡ್ಲ (ರಿ) ತುಳು ಸಂಘಟನೆ ,ತುಳುನಾಡು ವಾರ್ತೆ ವಾರ ಪತ್ರಿಕೆ ಮತ್ತು ನಮ್ಮ ಟಿ.ವಿ ಸಹಯೋಗದಲ್ಲಿ ಸೆ. 1, ಗುರುವಾರ ತುಳುನಾಡಿನ ತುತ್ತ ತುದಿಯಾದ ಬೆಳ್ತಂಗಡಿ ತಾಲೂಕಿನ “ಬಂಜಾರು ಮಲೆ” ಎಂಬ ಪ್ರದೇಶದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಈ ಅಭಿಯಾನವು 1 ಲಕ್ಷಕ್ಕೂ ಅಧಿಕ ಪೋಸ್ಟ್ ಕಾರ್ಡ್ ತುಳುನಾಡಿನ ಜನತೆಯಿಂದ ಬರೆಯಿಸಿ ಕಳುಹಿಸುವ ಗುರಿಯನ್ನು ಹೊಂದಿದ್ದು. ಈಗಾಗಲೇ ಅಭಯಾನಕ್ಕೆ ಹಲವು ಸಂಘಟನೆಗಳ ಬೆಂಬಲ ದೊರೆತಿದೆ. ಅಭಿಯಾನದ ಆಯೋಜಕರುಗಳು ತುಳುನಾಡಿನ ಎಲ್ಲಾ ರಾಜಕೀಯ, ಧಾರ್ಮಿಕ ಮತ್ತು ಎಲ್ಲಾ ಸಂಘಟನೆಗಳಿಗೆ ಈ ಅಭಿಯಾನದಲ್ಲಿ ಕೈ ಜೋಡಿಸುವಂತೆ ವಿನಂತಿ ಮಾಡಿದೆ.
Comments are closed.