ಮಂಗಳೂರು ; ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಅ. 3 ರಿಂದ 14 ರವರೆಗೆ ವೈಭವದಿಂದ ನಡೆಯಲಿದೆ. ದಸರಾ ಅಂಗವಾಗಿ ಪ್ರತಿನಿತ್ಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ಅನ್ನದಾನ ಸೇವೆಗಳು ನಡೆಯಲಿದೆ. ಈ ಬಾರಿಯ ದಸರಾಕ್ಕೂ ದೇಶ-ವಿದೇಶದಿಂದ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದರು.
ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಅ.3ರಂದು ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ನವಕಲಶಾಭಿಷೇಕ ಧರ್ನುಲಗ್ನಂ, ಕಲಶ ಪ್ರತಿಷ್ಠೆ, ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ, ದಸರಾ ಉದ್ಘಾಟನೆ, ಬಳಿಕ ಪುಷ್ಪಾಲಂಕಾರ ಮಹಾಪೂಜೆ, 12.30ರಿಂದ ಅನ್ನಸಂತರ್ಪಣೆ. ಭಜನಾ ಕಾರ್ಯಕ್ರಮ, ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ ಉತ್ಸವ ನಡೆಯಲಿದೆ. ಅ.4ರಂದು ಬೆಳಗ್ಗೆ 10.00ಕ್ಕೆ ದುರ್ಗಾಹೋಮ, 12.3೦ರಿಂದ ಅನ್ನಸಂತರ್ಪಣೆ. ಅ.5ರಂದು ಬೆಳಗ್ಗೆ ಗಂಟೆ 10.00ಕ್ಕೆ ಪಂಚ ದುರ್ಗಾಹೋಮ, 12.30ರಿಂದ ಅನ್ನಸಂತರ್ಪಣೆ, ಅ.6ರಂದು ಬೆಳಗ್ಗೆ ಗಂಟೆ 0.00ಕ್ಕೆ ಆರ್ಯ ದುರ್ಗಾಹೋಮ, 12.30ರಿಂದ ಅನ್ನಸಂತರ್ಪಣೆ. ಅ.7ರಂದು ಬೆಳಗ್ಗೆ 10.00ಕ್ಕೆ ಅಂಬಿಕಾ ದುರ್ಗಾ ಹೋಮ, 12.30ರಿಂದ ಅನ್ನಸಂತರ್ಪಣೆ ನಡೆಯಲಿದೆ ಎಂದರು.
ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್ ( ಅಡ್ವಕೇಟ್) ಅವರು ಮಾತನಾಡಿ, ಅ.3ರಂದು ಬೆಳಗ್ಗೆ 8.30ರಿಂದ ಉದ್ಘಾಟನಾ ಕಾರ್ಯಕ್ರಮ ಆರಂಭಗೊಳ್ಳಲ್ಲಿದ್ದು, ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಅವರು ವೈಭವದ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದರು.
ಅ. 8ರಂದು ಬೆಳಗ್ಗೆ ಗಂಟೆ 10.00ಕ್ಕೆ ಭಗವತೀ ದುರ್ಗಾ ಹೋಮ (ಲಲಿತಾ ಪಂಚಮಿ) 12.30ರಿಂದ ಅನ್ನಸಂತರ್ಪಣೆ, ಅ. 9ರಂದು ಬೆಳಗ್ಗೆ ಗಂಟೆ 9.00ಕ್ಕೆ ಸಾಮೂಹಿಕ ಚಂಡಿಕಾ ಹೋಮ, ಕುಮಾರಿ ದುರ್ಗಾ ಹೋಮ, ಪುಷ್ಪಾಲಂಕಾರ ಮಹಾಪೂಜೆ, 12.30ರಿಂದ ಅನ್ನಸಂತರ್ಪಣೆ. ಅ.10ರಂದು ಬೆಳಗ್ಗೆ ಗಂಟೆ 10.00ಕ್ಕೆ ಮಹಿಷರ್ದಿನಿ ದುರ್ಗಾ ಹೋಮ, 12.30ರಿಂದ ಅನ್ನಸಂತರ್ಪಣೆ. ಅ.11ರಂದು ಬೆಳಗ್ಗೆ ಗಂಟೆ 10.00ಕ್ಕೆ ಚಂಡಿಕಾಹೋಮ ಹಗಲೋತ್ಸವ,12.30ರಿಂದ ಅನ್ನಸಂತರ್ಪಣೆ. ಅ.12ರಂದು ಬೆಳಗ್ಗೆ ಗಂಟೆ 10.00ಕ್ಕೆ ಸರಸ್ವತಿ ದುರ್ಗಾಹೋಮ, 11.30ರಿಂದ ಶತ ಸೀಯಾಳಾಭಿಷೇಕ, ಶಿವಪೂಜೆ (ಮಹಾನವಮಿ), ಮಹಾಅನ್ನಸಂತರ್ಪಣೆ ನಡೆಯಲಿದೆ ಎಂದು ಅವರು ವಿವರ ನೀಡಿದರು.
ನವದುರ್ಗೆಯರ ಮತ್ತು ಶಾರದಾ ಮಾತೆಯ ವೈಭವದ ಮೆರವಣಿಗೆ:
ಅ.13ರಂದು ಬೆಳಗ್ಗೆ ಗಂಟೆ 10.00ರಿಂದ ವಾಗೀಶ್ವರಿ ದುರ್ಗಾಹೋಮ, 12.30ಕ್ಕೆ ಶಿವಪೂಜೆ. ಸಂಜೆ 4.00ರಿಂದ ಮಹಾಗಣಪತಿ, ನವದುರ್ಗೆ, ಆದಿಶಕ್ತಿಯೊಂದಿಗೆ ಶ್ರೀ ಶಾರದ ಮಾತೆಯ ಶೋಭಾಯಾತ್ರೆ ನಡೆಯಲಿದೆ. ಅ.14ರಂದು ಬೆಳಗ್ಗೆ ಪ್ರಾತಃಕಾಲ ಮಂಟಪ ಪೂಜೆ ಬಳಿಕ ಶಾರದಾ ವಿಸರ್ಜನೆ, ರಾತ್ರಿ 7.00ರಿಂದ ಭಜನಾ ಕಾರ್ಯಕ್ರಮ, 8.00ರಿಂದ ಗುರುಪೂಜೆ ನಡೆಯಲಿದೆ ಎಂದರು.
ಹಾಫ್ ಮ್ಯಾರಥಾನ್: 2ಸಾವಿರಕ್ಕೂ ಅಧಿಕ ಮಂದಿ ಭಾಗಿ
ಅ.6ರಂದು ಬೆಳಗ್ಗೆ 5.30ಕ್ಕೆ ಹಾಫ್ ಮ್ಯಾರಥಾನ್ ನಡೆಯಲಿದ್ದು, 2ಸಾವಿರಕ್ಕೂ ಅಧಿಕ ಮಂದಿ ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪ್ರತಿನಿತ್ಯ ಸಂಜೆ ಸಂತೋಷಿ ಕಲಾ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪದ್ಮರಾಜ್ ಅವರು ತಿಳಿಸಿದರು.
ಸೆ.13 ರಂದು ಭವ್ಯ ಶೋಭಾಯಾತ್ರೆ – ಮತ್ತಷ್ಟು ವೈಭವ ತುಂಬಲಿದೆ ನೃತ್ಯ ತಂಡಗಳು, ಕಲಾ ತಂಡಗಳು, ಸ್ತಬ್ದ ಚಿತ್ರಗಳು : ಸಾಯಿರಾಂ
ಅ.13ರ ಭಾನುವಾರ ಸಂಜೆ 4.00ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ಕೇರಳದ ಮೈನವಿರೇಳಿಸುವ ಚೆಂಡೆ ವಾದ್ಯ, ರಾಜ್ಯದ ನಾನಾ ಕಡೆಯಿಂದ ಆಗಮಿಸುವ ಜಾನಪದ, ಸಾಂಸ್ಕೃತಿಕ ಹಿನ್ನಲೆಯ ನೃತ್ಯ ತಂಡಗಳು ನಾನಾ ಜಿಲ್ಲೆಯ, ರಾಜ್ಯಗಳ ಕಲಾ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ. ಮಂಗಳೂರು ದಸರಾ ಮಹೋತ್ಸವ ಹಾದು ಹೋಗುವ ರಸ್ತೆ ಸೇರಿದಂತೆ ನಗರದ ಕಟ್ಟಡಗಳನ್ನು ಅಲಂಕರಿಸುವ ಮೂಲಕ ಮಹೋತ್ಸವಕ್ಕೆ ಮತ್ತಷ್ಟು ವೈಭವ ತುಂಬಲಿದೆ ಎಂದು ದೇವಸ್ಥಾನದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಅವರು ಹೇಳಿದರು.
ಈ ಬಾರಿ ಕ್ಷೇತ್ರದ ಮಹಾದ್ವಾರದ ಒಳಗೆ ವ್ಯಾಪರಕ್ಕೆ ಅವಕಾಶವಿಲ್ಲ :
ಹಲವಾರು ವರ್ಷಗಳಿಂದ ಜಾತ್ರ ಮಹೋತ್ಸವ ಸಂದರ್ಭ ಶ್ರೀ ಕ್ಷೇತ್ರದ ಮಹದ್ವಾರದ ಒಳಗಿನ ರಸ್ತೆಯಲ್ಲಿ ವ್ಯಾಪರಕ್ಕೆ ಅವಕಾಶ ನೀಡುತ್ತಿದ್ದೇವು. ಆದರೆ ಸಾರ್ವಜನಿಕರಿಗೆ ಜಾತ್ರ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಈ ಬಾರಿ ಕ್ಷೇತ್ರದ ಮಹಾದ್ವಾರದ ಒಳಗೆ ವ್ಯಾಪರಕ್ಕೆ ಅವಕಾಶ ನೀಡಲಾಗುತ್ತಿಲ್ಲ ಎಂದು ಎಚ್.ಎಸ್. ಸಾಯಿರಾಂ ಅವರು ತಿಳಿಸಿದರು
ದೇವಸ್ಥಾನದ ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ರವಿಶಂಕರ್ ಮಿಜಾರು, ಎಂ. ಶೇಖರ್ ಪೂಜಾರಿ, ಜಗದೀಪ್ ಡಿ. ಸುವರ್ಣ, ದೇವಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ-ಉಪಾಧ್ಯಕ್ಷ ಡಾ. ಅನಸೂಯ ಬಿ.ಟಿ. ಸಾಲ್ಯಾನ್, ಉಪಾಧ್ಯಕ್ಷರಾದ ಬಿ.ಜಿ. ಸುವರ್ಣ, ದೇವಳ ಅಭಿವೃದ್ಧಿ ಸಮಿತಿ ಸದಸ್ಯರಾದ ಸದಸ್ಯ ಹರಿಕೃಷ್ಣ ಬಂಟ್ವಾಳ್, ಕಿಶೋರ್ ದಂಡೆಕೇರಿ, ವಾಸುದೇವ ಕೋಟ್ಯಾನ್, ಎಚ್.ಎಸ್. ಜೈರಾಜ್, ಲತೀಶ್ ಎಂ. ಸುವರ್ಣ,ರಾಧಾಕೃಷ್ಣ , ಲೀಲಾಕ್ಷ ಕರ್ಕೇರಾ, ಚಂದನ್ದಾಸ್, ಗೌರವಿ ರಾಜಶೇಖರ್, ಕೃತಿನ್ ದೀರಾಜ್ ಅಮೀನ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Comments are closed.