ಕರ್ನಾಟಕ

ಪ್ರತ್ಯೇಕ ಉತ್ತರ ಕರ್ನಾಟಕದ ಸಿಎಂ ನಾನೇ: ಉಮೇಶ್ ಕತ್ತಿ

Pinterest LinkedIn Tumblr

Katti

ಬೆಂಗಳೂರು, ಸೆ.16: ಮತ್ತೆ ಪ್ರತ್ಯೇಕ ರಾಜ್ಯದ ಕೂಗನ್ನೆಬ್ಬಿಸಿ ವಿವಾದ ಸೃಷ್ಟಿಸಿರುವ ಮಾಜಿ ಸಚಿವ ಉಮೇಶ್ ಕತ್ತಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ನಾನೇ ಆಗುತ್ತೇನೆ ಎಂದು ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದರ ಜತೆ ಮಾತನಾಡುತ್ತಿದ್ದ ಅವರು, ನಾನು ಅಖಂಡ ಕರ್ನಾಟಕದ ಮುಖ್ಯಮಂತ್ರಿಯಾಗಬೇಕೆಂಬ ಕನಸು ಹೊಂದಿದ್ದೆ. ಅದು ಸಾಧ್ಯವಾಗಲಿಲ್ಲ. ಹಾಗಾಗಿ ಪ್ರತ್ಯೇಕ ರಾಜ್ಯ ಸ್ಥಾಪನೆಯಾದಾಗ ಅದರ ಸಿಎಂ ಆಗುತ್ತೇನೆ ಎಂದಿದ್ದಾರೆ.

ಉತ್ತರ ಕರ್ನಾಟಕ ಸತತವಾಗಿ ನಿರ್ಲಕ್ಷಕ್ಕೆ ಒಳಪಟ್ಟಿರುವುದರಿಂದ ಅಭಿವೃದ್ಧಿಯನ್ನೇ ಕಂಡಿಲ್ಲ. ಹಾಗಾಗಿ ವಿಕಾಸದ ದೃಷ್ಟಿಯಿಂದ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಸ್ಥಾಪನೆಯಾಗಲೇಬೇಕು ಮತ್ತು ನಾನು ಆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ. 10 ವರ್ಷ ಸಚಿವನಾಗಿ ಮತ್ತು 6 ಬಾರಿ ಶಾಸಕನಾಗಿ ಕಾರ್ಯ ನಿರ್ವಹಿಸಿರುವ ನನಗೆ ಮುಖ್ಯಮಂತ್ರಿಯಾಗುವ ಯೋಗ್ಯತೆ ಇದೆ ಎಂದು ಮುಖ್ಯಮಂತ್ರಿಗಿರಿಯ ಆಸೆ ಕುರಿತು ಸಮರ್ಥನೆ ನೀಡಿದರು. ಈ ಮೂಲಕ ಮುಖ್ಯಮಂತ್ರಿ ಪದವಿಯ ಮೇಲಿನ ತಮ್ಮ ಪ್ರಬಲ ಬಯಕೆಯನ್ನವರು ವ್ಯಕ್ತಪಡಿಸಿದ್ದಾರೆ.

Write A Comment