ಬೆಂಗಳೂರು, ಸೆ.21: ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವ ಕಾಂಗ್ರೆಸ್ ಮುಖಂಡರ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುವುದು ಪ್ರಧಾನಿಗೆ ಮಾಡಿದ ಅವಮಾನ ಎಂದು ಸಂಸದ ವೀರಪ್ಪ ಮೊಯ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ರವಿವಾರ ನಗರದ ಜ್ಞಾನಜ್ಯೋತಿ ಸಭಾಂಗಣ ದಲ್ಲಿ ಆಯೋಜಿಸಿದ್ದ ಡಾ.ಶಿವಮೂರ್ತಿ ಮುರು ಘಾ ಶರಣರು ರಚಿಸಿರುವ ಕೃತಿಯಗಳನ್ನು ಬಿಡುಗಡೆ ಮಾಡಿದ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಜನಪ್ರತಿನಿಧಿಗಳ ಕರ್ತವ್ಯ ಹಾಗೂ ಜವಾಬ್ದಾರಿ. ಆದರೆ, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡರ ವಿರುದ್ಧ ಘೋಷಣೆ ಕೂಗುವುದರ ಮೂಲ ಕ ಕಾರ್ಯಕ್ರಮಕ್ಕೆ ಅಪಮಾನ ಮಾಡುತ್ತಿದ್ದಾರೆಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಬಿಜೆಪಿ ಕಾರ್ಯಕರ್ತರ ವರ್ತನೆ ಸರಿಯಿಲ್ಲವಾದ್ದರಿಂದ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿಲು ಹಿಂದೇಟು ಹಾಕು ತ್ತಿದ್ದಾರೆ. ಹಾಗಾಗಿ ಬಿಜೆಪಿ ಮುಖಂಡರು ಕಾರ್ಯಕರ್ತರಿಗೆ ಸೌಜನ್ಯವಾಗಿ ನಡೆದುಕೊಳ್ಳು ವುದನ್ನು ಹೇಳಿಕೊಡಬೇಕಾಗಿದೆ ಎಂದು ಅವರು ಕಿವಿಮಾತು ಹೇಳಿದರು.