ಬೆಂಗಳೂರು, ಸೆ.27: ಮುಂದಿನ ವರ್ಷದೊಳಗೆ 5 ಸಾವಿರ ಶುದ್ಧ ಕುಡಿಯುವ ನೀರಿನ ಘಟಕ ಮತ್ತು 10 ಸಾವಿರ ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಶನಿವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಐದು ಲಕ್ಷ ಶೌಚಾಲಯ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ ಎಂದರು.
ಮುಂದಿನ ತಿಂಗಳು ಅ.2ರಂದು 100 ಗ್ರಾಮಗ ಳನ್ನು ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗುವುದು. ಮುಂದಿನ ಸಾಲಿನ ಜ.26ಕ್ಕೆ 5 ಸಾವಿರ ಗ್ರಾಮಗಳು, ಆ.15ರಂದು 10 ಸಾವಿರ ಗ್ರಾಮಗಳು, ಅ.2ರಂದು 20 ಸಾವಿರ ಗ್ರಾಮಗ ಳನ್ನು ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
ಈಗಾಗ ಒಂದು ಸಾವಿರ ಶುದ್ಧ ಕುಡಿಯುವ ನೀರಿ ನ ಘಟಕಗಳನ್ನು ರಾಜ್ಯದಲ್ಲಿ ಸ್ಥಾಪಿಸಲಾಗಿದೆ. ಮುಂ ದಿನ ಆರ್ಥಿಕ ವರ್ಷದಲ್ಲಿ ಎರಡು ಸಾವಿರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತದೆ ಎಂದು ಅವರು ಹೇಳಿದರು.
ಪ್ರಸಕ್ತ ಸಾಲಿನ ನ.14ರಂದು ಮಕ್ಕಳಿಗೆ ಆಟವಾ ಡಲು ಆಟದ ಮೈದಾನವಿಲ್ಲದ ಗ್ರಾಮಗಳಲ್ಲಿ ಆಟದ ಮೈದಾನಗಳನ್ನು ಅಭಿವೃದ್ಧಿ ಪಡಿಸಲು ಒಂದು ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
ಈವರೆಗೆ ಸುಮಾರು 1.45 ಲಕ್ಷ ತೆರೆದ ಕೊಳವೆ ಬಾವಿಗಳನ್ನು ರಾಜ್ಯದಲ್ಲಿ ಮುಚ್ಚಲಾಗಿದೆ. ಇದರ ಬಗ್ಗೆ ಮಾಹಿತಿ ಬೇಕಾದರೆ ನಮ್ಮ ಇಲಾಖೆಯನ್ನು ಸಂಪರ್ಕಿ ಸಬಹುದು. ಅದೇ ಮುಂದಿನ ವರ್ಷದಲ್ಲಿ ಬೋರ್‌ವೆಲ್‌ಗಳನ್ನು ಕೊರೆದಾಗ ಒಂದು ಇಂಚು ನೀರು ಬಂದಿರುವ ಬೋರ್‌ವೆಲ್‌ಗಳನ್ನು ಪುನರುಜ್ಜೀವನಗೊಳಿಸಲಾಗುವುದು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.