ಬೆಂಗಳೂರು, ಸೆ.27: ಹಳೆಯ ವಿಮಾನ ನಿಲ್ದಾಣ ದಿಂದ ವೈಟ್‌ಫೀಲ್ಡ್‌ಗೆ ಸಂಪರ್ಕ ಕಲ್ಪಿಸುವ ಮಾರ್ಗ ದಲ್ಲಿರುವ ಕುಂದಲಹಳ್ಳಿ ಜಂಕ್ಷನ್‌ನಲ್ಲಿ ವಾಹನ ದಟ್ಟಣೆ ನಿವಾರಿಸಲು ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ಕೂಡಪ್ರಾರಂಭಿಸಿ 18 ತಿಂಗಳಲ್ಲಿ 17 ಕಿ.ಮೀ ಉದ್ದದ ರಸ್ತೆಯನ್ನು ಸಿಗ್ನಲ್ ರಹಿತ ಕಾರಿಡಾರನ್ನಾಗಿ ಮಾಡಲಾ ಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಉಸ್ತು ವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಶನಿವಾರ ಬಿಬಿಎಂಪಿಯ ಮಹದೇವಪುರ ವಲಯ ದ ವ್ಯಾಪ್ತಿಯಲ್ಲಿ ಮೇಯರ್ ಎನ್.ಶಾಂತಕುಮಾರಿ, ಉಪಮೇಯರ್ ಕೆ.ರಂಗಣ್ಣ, ಕೆ.ಆರ್.ಪುರ ಶಾಸಕ ಭೈರತಿ ಬಸವರಾಜ್ ಹಾಗೂ ಸ್ಥಳೀಯ ಪಾಲಿಕೆಯ ಸದಸ್ಯರೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಕೈಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಹಳೆಯ ವಿಮಾನ ನಿಲ್ದಾಣದ ರಸ್ತೆಯನ್ನು ಸಿಗ್ನಲ್ ರಹಿತ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಕುಂದಲಹಳ್ಳಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ನಿರ್ಮಾ ಣದಿಂದ ವಾಹನ ಸಂಚಾರ ದಟ್ಟಣೆ ನಿವಾರಿಸಲು ಅನು ಕೂಲವಾಗಲಿದೆ. ಆದುದರಿಂದ, ಅಂಡರ್‌ಪಾಸ್‌ನಿರ್ಮಾಣ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳ ಲು ರಸ್ತೆ ಮೂಲಸೌಕರ್ಯ ವಿಭಾಗದ ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಅದಲ್ಲದೆ ಕುಂದಲಹಳ್ಳಿ, ಐಟಿಪಿಎಲ್ ಮತ್ತು ವೈಟ್‌ಫೀಲ್ಡ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ಸಂಚಾರ ತೀವ್ರವಾಗಿರುವುದರಿಂದ ಹಾಗೂ ರಸ್ತೆಗಳು ಬಹಳ ಹಾಳಾಗಿವೆ. 46 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 40 ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಈ ರಸ್ತೆಗಳ ಅಭಿವೃದ್ಧಿ ಕೆಲಸ ಮುಂದಿನ ಸಾಲಿನ ಎಪ್ರಿಲ್‌ನೊಳಗಾಗಿ ಪೂರ್ಣಗೊಳಿಸಲು ಅವರು ಕಟ್ಟು ನಿಟ್ಟಿನ ಆದೇಶ ನೀಡಿದರು.
ಮೊದಲು ಹೊರಮಾವು ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಸ್ಥಳ ಪರಿಶೀಲನೆ ನಡೆಸಿದ ಅವರು, ಲೆವೆಲ್ ಕ್ರಾ ಸಿಂಗ್ ಇರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರೈಲ್ವೆ ಕೆಳ ಸೇತುವೆ ನಿರ್ಮಾಣಕ್ಕಾಗಿ ಕ್ರಮ ಕೈಗೊಳ್ಳಲು ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು. ನೈಋತ್ಯ ಇಲಾಖೆಯಲ್ಲಿ ಬಾಕಿ ಇರುವ ಯೋಜ ನೆಗಳಿಗೆ ಅನುಮೋದನೆ ಪಡೆದು ಯೋಜನಾ ವರದಿ ಸಿದ್ಧಪಡಿಸುವುದು, ಹೊರಮಾವು, ತಂಬುಚೆಟ್ಟಿಪಾಳ್ಯ ದಿಂದ ಕೆ.ಆರ್.ಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ನಗರೋತ್ಥಾನ ಯೋಜನೆ ಅಡಿಯಲ್ಲಿ ಕೈಗೆತ್ತಿಕೊಳ್ಳಲು ಅವರು ತಿಳಿಸಿದರು.
ಕೆ.ಆರ್.ಪುರ ಸರಕಾರಿ ಪದವಿ ಕಾಲೇಜಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸಭಾಂಗಣ ಕಾಮಗಾರಿಯ ಪರಿಶೀಲನೆ ನಡೆಸಿದ ಅವರು, ಕಳೆದ ಎರಡು ವರ್ಷ ಗಳಿಂದ ನಿರ್ಮಾಣ ಕಾಮಗಾರಿಯು ಅರ್ಧದಲ್ಲಿ ನಿಂತಿದೆ. ಅದನ್ನು ಪೂರ್ಣಗೊಳಿಸಲು ಅವಶ್ಯಕ ಅನುದಾನ ಬಿಡುಗಡೆ ಮಾಡಲಾಗುವುದು. ಆದ್ದರಿಂದ, ಕೂಡಲೇ ಕಾಮಗಾರಿ ಪ್ರಾರಂಭಿಸಲು ರಾಜ್ಯ ಗ್ರಾಮೀಣ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶೀಲನೆ ಸಂದರ್ಭದಲ್ಲಿ ಅಲ್ಲಲ್ಲಿ ಕಸದ ಮತ್ತು ಮಣ್ಣಿನ ರಾಶಿ ಮತ್ತು ರಸ್ತೆಗಳಲ್ಲಿ ಗುಂಡಿ ಬಿದ್ದಿರುವುದನ್ನು ಗಮನಿಸಿದ ಅವರು, ಗುಂಡಿ ಮುಚ್ಚುವ ಕಾರ್ಯ ತೀವ್ರಗೊಳಿಸಲು ಮತ್ತು ಕಸದ ರಾಶಿ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಜಂಟಿ ಆಯುಕ್ತರಿಗೆ ಸೂಚಿಸಿದರು. ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸದೆ ಇರುವುದರಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ದಂಡ ವಿಧಿಸಲು ಸೂಚಿಸಿದರು.
ನಂತರ, ಶಾಸಕರು, ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ವಾರ್ಡ್‌ಗಳಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ತಕ್ಷಣವೆ ಪ್ರಾರಂಭಿಸಬೇಕು ಮತ್ತು ಪ್ರಸಕ್ತ ಸಾಲಿನ ಪಿಒಡಬ್ಲು ಕಾಮಗಾರಿಗಳಿಗೆ ಅನುಮೋದನೆ ಪಡೆದು ಒಂದು ತಿಂಗಳಲ್ಲಿ ಟೆಂಡರ್ ಆಹ್ವಾನಿಸಲು ಸೂಚಿಸಿದರು. ಸಭೆಯಲ್ಲಿ ಪಾಲಿಕೆ ಸದಸ್ಯ ರ ಅಹವಾಲುಗಳನ್ನು ಆಲಿಸಿದ ಸಂದರ್ಭದಲ್ಲಿ ಸದಸ್ಯ ರಾದ ಪೂರ್ಣಿಮಾ ಮತ್ತು ಸುಕುಮಾರ್, ಪಿಳ್ಳಪ್ಪ ಮತ್ತು ಆಂಜನೇಯ ರೆಡ್ಡಿ ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪಾಲಿಕೆ ಸದಸ್ಯರು ಹಾಗೂ ವಲಯ ಮುಖ್ಯ ಎಂಜಿನಿಯರ್ ಮಾಡಿದ ಆರೋಪದ ಮೇರೆಗೆ ಜನಪ್ರತಿನಿಧಿಗಳ ಸಮಸ್ಯೆಗೆ ಸ್ಪಂದಿಸದೆ ಕೆಲಸ ನಿರ್ವ ಹಿಸುತ್ತಿರುವ ಹೂಡಿ ವಿಭಾಗದ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ದಯಾನಂದರನ್ನು ಕೂಡಲೆ ಮಾತೃ ಇಲಾಖೆಗೆ ಕಳುಹಿಸಲು ರಾಮಲಿಂಗಾರೆಡ್ಡಿ ಆದೇಶಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಉದಯಕುಮಾರ್, ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ರೆಡ್ಡಿ, ಎಚ್.ಎಸ್.ಅಮಾನುಲ್ಲಾ, ಆಯುಕ್ತ ಎಂ. ಲಕ್ಷ್ಮೀನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಎಸ್.ನಾರಾಯಣಸ್ವಾಮಿ, ಪ್ರಸಾದ್‌ರೆಡ್ಡಿ, ಕೆ.ಸಿ. ಬೀರಪ್ಪ, ಅಂತೋಣಿಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.