ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಮಾರ್ಚ್ 30 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭ

Pinterest LinkedIn Tumblr

ksee-board

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ  ಪರೀಕ್ಷಾ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.

2014-15ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷಾ ದಿನಾಂಕ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗುವ ಸಮಯ ಶುರುವಾಗಿದೆ.

ಮಾರ್ಚ್ 30 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭಗೊಂಡು ಏ.13ಕ್ಕೆ ಪರೀಕ್ಷೆಗಳು ಮುಕ್ತಾಯಗೊಳ್ಳಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋಧ ಬೋಪಣ್ಣ ಬೆಂಗಳೂರಿನಲ್ಲಿ ಬುಧವಾರ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಯಶೋಧ ಬೋಪಣ್ಣ 2014-15ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷಾ ದಿನಾಂಕ ಪ್ರಕಟಗೊಳಿಸಲಾಗಿದೆ. ಎಸ್ಸೆಸೆಲ್ಸಿ ಪರೀಕ್ಷೆಗಳು ಮಾರ್ಚ್ 30 ರಿಂದ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಗಮನ ಹರಿಸಬೇಕು ಎಂದು ವಿವರಿಸಿದರು.

Write A Comment